ಕರ್ನಾಟಕ

karnataka

ETV Bharat / city

ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ : ಹೈಕೋರ್ಟ್ - ಕರ್ನಾಟಕ ಹೈಕೋರ್ಟ್​​​ನ ಸುದ್ದಿ

ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಭರ್ತಿ ಮಾಡಲು ಕಾಲಮಿತಿ ನಿಗದಿಪಡಿಸಬೇಕು. ಆ ಅವಧಿಯೊಳಗೆ ಭರ್ತಿ ಮಾಡಬೇಕು ಎಂದು ಸೂಚಿಸಿತು. ಇನ್ನು, ಸಮರ್ಥ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಉಪಕರಣಗಳನ್ನು ಸರ್ಕಾರವೇ ನ್ಯಾಯಾಲಯಕ್ಕೆ ನೀಡಿರುವ ಮಾಹಿತಿಯಂತೆ ಮೂರು ವರ್ಷಗಳ ಕಾಲಮಿತಿಯಲ್ಲಿ ಖರೀದಿಸಬೇಕು ಎಂದು ಪೀಠ ನಿರ್ದೇಶಿಸಿದೆ..

high-court-directed-to-appoint-fsl-post
ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಿ : ಹೈಕೋರ್ಟ್

By

Published : Aug 20, 2021, 10:48 PM IST

ಬೆಂಗಳೂರು : ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಮತ್ತು ಕಾಲಮಿತಿಯಲ್ಲಿ ಭರ್ತಿ ಮಾಡಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಹಾಗೆಯೇ ಮೂಲಸೌಕರ್ಯ ಒದಗಿಸುವಂತೆ ಸೂಚಿಸಿದೆ.

ಈ ಕುರಿತು ಹೈಕೋರ್ಟ್ ಸ್ವಯಂ ದಾಖಲಿಸಿಕೊಂಡಿರುವ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಖಾಲಿ ಹುದ್ದೆಗಳ ಭರ್ತಿಗೆ ಕೆಲ ನಿರ್ದೇಶನಗಳನ್ನು ನೀಡಿದ ಪೀಠ, ನಿರ್ದೇಶನಗಳ ಪಾಲನೆ ಮಾಡಲು ಕೈಗೊಂಡ ಕ್ರಮಗಳ ಕುರಿತು ಅಕ್ಟೋಬರ್ 9ಕ್ಕೆ ವಿವರಣೆ ನೀಡಿ ಎಂದು ಸೂಚಿಸಿತು.

ಖಾಲಿ ಇರುವ 311 ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದ ಪೀಠ, 3 ಜಂಟಿ ನಿರ್ದೇಶಕರ ಹುದ್ದೆ 1 ತಿಂಗಳಲ್ಲಿ, 10 ಉಪ ನಿರ್ದೇಶಕರು ಮತ್ತು 25 ಸಹಾಯಕ ನಿರ್ದೇಶಕರ ಹುದ್ದೆಗಳನ್ನು 4 ತಿಂಗಳಲ್ಲಿ, ಖಾಲಿ ಇರುವ 39 ಹಿರಿಯ ವೈಜ್ಞಾನಿಕ ಅಧಿಕಾರಿಗಳ ಹುದ್ದೆಗಳನ್ನು 4 ತಿಂಗಳಲ್ಲಿ ಮತ್ತು 138 ವೈಜ್ಞಾನಿಕ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿತು.

ಅಲ್ಲದೇ, ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಭರ್ತಿ ಮಾಡಲು ಕಾಲಮಿತಿ ನಿಗದಿಪಡಿಸಬೇಕು. ಆ ಅವಧಿಯೊಳಗೆ ಭರ್ತಿ ಮಾಡಬೇಕು ಎಂದು ಸೂಚಿಸಿತು. ಇನ್ನು, ಸಮರ್ಥ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಉಪಕರಣಗಳನ್ನು ಸರ್ಕಾರವೇ ನ್ಯಾಯಾಲಯಕ್ಕೆ ನೀಡಿರುವ ಮಾಹಿತಿಯಂತೆ ಮೂರು ವರ್ಷಗಳ ಕಾಲಮಿತಿಯಲ್ಲಿ ಖರೀದಿಸಬೇಕು ಎಂದು ಪೀಠ ನಿರ್ದೇಶಿಸಿದೆ.

ಇದನ್ನೂ ಓದಿ:ಕಂಪನಿಯೊಂದರ ಚೆಕ್​ಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನ.. ಇಬ್ಬರ ಬಂಧನ

ABOUT THE AUTHOR

...view details