ಬೆಂಗಳೂರು:ಮೈಸೂರಿನ ಟಿ.ನರಸೀಪುರ ಪುರಸಭೆಯ ಹೊಸ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಪ್ರತಿಮೆ ಸ್ಥಾಪನೆಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಅಗತ್ಯ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಮೆ ಅನಾವರಣಗೊಳಿಸದಂತೆ ತಡೆಯಾಜ್ಞೆ ಕೋರಿ ಎಸ್. ಕರಿಯಪ್ಪ ಸೇರಿದಂತೆ ಟಿ.ನರಸೀಪುರ ತಾಲೂಕಿನ 13 ಮಂದಿ ನಿವಾಸಿಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಪೀಠ, ಹೊರ ತಿರುಮಕೂಡಲು ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಹಂಚಲಾಗಿದ್ದು ಕಾರ್ಯಕ್ರಮಕ್ಕೆ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ.