ಬೆಂಗಳೂರು: ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಕುರಿತು ಮಾಹಿತಿ ಇರುವ ಪುಸ್ತಕದಲ್ಲಿ ಜಕ್ಕೂರು ಏರೋಡ್ರೋಮ್ ಬಗ್ಗೆ ಇರುವ ಮಾಹಿತಿಗಳನ್ನು ನೀಡುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಜಕ್ಕೂರು ಏರೋಡ್ರೋಮ್ ಬಗ್ಗೆ ಮಾಹಿತಿ ಕೇಳಿದ ಹೈಕೋರ್ಟ್ - ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ
ಜಕ್ಕೂರು ಏರೋಡ್ರೋಮ್ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೂಚಿಸಿದೆ.
ಜಕ್ಕೂರು ಏರೋಡ್ರೋಮ್ ಹಾಗೂ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಎಲಿವೇಟೆಡ್ ಮೆಟ್ರೋ ರೈಲ್ವೆ ಟ್ರ್ಯಾಕ್ ನಿರ್ಮಾಣ ಪ್ರಶ್ನಿಸಿ ವಕೀಲ ಅಜಯ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ನಾಗರಿಕ ವಿಮಾನಯಾನ ಸಚಿವಾಲಯ 2015ರಲ್ಲಿ ರೂಪಿಸಿರುವ ನಿಯಮಗಳಿಗೆ ವಿರುದ್ಧವಾಗಿ ಮೆಟ್ರೋ ರೈಲು ಕಾಮಗಾರಿ ನಡೆಸಲು ಮುಂದಾಗಿದ್ದಾರೆ ಎಂದು ದೂರಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಕಾಮಗಾರಿಯು ನಿಯಮಗಳಿಗೆ ವಿರುದ್ಧವಾಗಿ ಇದೆಯೇ ಎಂಬುದರ ಕುರಿತು ಡಿಜಿಸಿಎ ಮುಖ್ಯಸ್ಥರು ಸ್ಪಷ್ಟನೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.