ಬೆಂಗಳೂರು : ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಐದು ಜಿಲ್ಲೆಗಳಲ್ಲಿ ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಸಮಗ್ರ ಮಾಹಿತಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜಧಾನಿ ಹೊರತುಪಡಿಸಿ ರಾಜ್ಯದ ಕೊರೊನಾ ಪ್ರಕರಣಗಳ ವರದಿ ಕೇಳಿದ ಹೈಕೋರ್ಟ್ - ರಾಜ್ಯದ ಕೊರೊನಾ ಪ್ರಕರಣಗಳ ವರದಿ
ಸಿಲಿಕಾನ್ ಸಿಟಿ ಹೊರತು ಪಡಿಸಿ ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಐದು ಜಿಲ್ಲೆಗಳಲ್ಲಿ ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಸಮಗ್ರ ಮಾಹಿತಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಐದು ಜಿಲ್ಲೆಗಳು ಯಾವುವು? ಅಲ್ಲಿ ಕೋವಿಡ್-19 ನಿರ್ವಹಣೆ ಹೇಗಿದೆ? ಪರೀಕ್ಷಾ ವರದಿ ನೀಡಲು ಕಾಲಮಿತಿ ನಿಗದಿಯಾಗಿದೆಯೇ? ಪಾಸಿಟಿವ್ ಬಂದಾಗ ಆಸ್ಪತ್ರೆಗೆ ಹೋಗುವ ಪ್ರಕ್ರಿಯೆ ಏನು? ಯಾರನ್ನು ಮೊದಲು ಸಂಪರ್ಕಿಸಬೇಕು? ವ್ಯಕ್ತಿಗೆ ಸೋಂಕು ದೃಢಪಟ್ಟ ತಕ್ಷಣವೇ ಯಾವೆಲ್ಲ ವೈದ್ಯಕೀಯ ಸೌಲಭ್ಯ ಪಡೆಯಬಹುದು? ಅವುಗಳನ್ನು ಪಡೆಯಲು ಯಾವ ವ್ಯವಸ್ಥೆ ಇದೆ? ಅವರು ಸೋಂಕಿತರನ್ನು ಸಂಪರ್ಕಿಸಲು ಎಷ್ಟು ಸಮಯ ಹಿಡಿಯುತ್ತದೆ? ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಪೀಠ ಸೂಚಿಸಿದೆ.