ಕರ್ನಾಟಕ

karnataka

ETV Bharat / city

ಮಹದಾಯಿ ಹೋರಾಟ: ಪರಿಹಾರ ನೀಡುವ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಮಹಾದಾಯಿ ಹೋರಾಟದ ಸಂದರ್ಭದಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿದ ಲಾಠಿ ಚಾರ್ಜ್​ ವಿಚಾರಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಕುರಿತು ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್, ಈ ವಿಚಾರಣೆಯನ್ನು ಸೆಪ್ಟೆಂಬರ್​ 19ಕ್ಕೆ ಮುಂದೂಡಿದೆ.

mahadayi water dispute Police Beating Protesters

By

Published : Aug 22, 2019, 8:23 PM IST

ಬೆಂಗಳೂರು: ಮಹಾದಾಯಿ ಹೋರಾಟದ ಸಂದರ್ಭದಲ್ಲಿ ಪೊಲೀಸರಿಂದ ಲಾಠಿ ಚಾರ್ಜ್​ಗೆ ಒಳಗಾದ ರೈತರಿಗೆ ಪರಿಹಾರ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ವಕೀಲ ಅಮೃತೇಶ್ ಅವರು ರೈತರ ಪರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಡೆಯಿತು.

ಹೋರಾಟದಲ್ಲಿ ಪೊಲೀಸರ ಲಾಠಿ ಏಟು ತಿಂದ ಸಂತ್ರಸ್ತರಿಗೆ ಬಿಡಿಗಾಸಿನ ಪರಿಹಾರ ನೀಡಲು ಇದುವರೆಗೂ ಕ್ರಮ ಕೈಗೊಂಡಿಲ್ಲ. ಅಂದು ನಡೆದ ಘಟನೆಗಳ ವಿಡಿಯೋ ಇದೆ. ಆದರೂ ಸರ್ಕಾರ ಕ್ರಮ ಜರುಗಿಸದೇ ಇರುವುದು ನೋವಿನ ಸಂಗತಿ. ಇದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ವಕೀಲ ಅಮೃತೇಶ್ ವಾದ ಮಂಡಿಸಿದರು.

ಈ ವೇಳೆ ನ್ಯಾಯಪೀಠ, ಘಟನೆ ನಡೆದ ಬಳಿಕ ಎಡಿಜಿಪಿ ಕಮಲ್ ಪಂತ್ ಅವರು ವರದಿ ಸಲ್ಲಿಸಿದ್ದಾರೆ. ಅದರ ಆಧಾರದ ಮೇಲೆ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶ‌ನ ನೀಡಿ ವಿಚಾರಣೆ ಸೆ.19ಕ್ಕೆ‌ ಮುಂದೂಡಿದೆ.

ABOUT THE AUTHOR

...view details