ಕರ್ನಾಟಕ

karnataka

ETV Bharat / city

ಮೈಸೂರು ಮೇಯರ್ ಹುದ್ದೆ ಮೀಸಲು ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - mysore mayor controversy

ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಪಡಿಸಿ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

high court issues notice to government on mysore mayor controversy
high court issues notice to government on mysore mayor controversy

By

Published : Feb 22, 2021, 9:54 PM IST

ಬೆಂಗಳೂರು:ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಪಡಿಸಿ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಪಾಲಿಕೆ ಸದಸ್ಯ ಸಮಿವುಲ್ಲಾ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್. ಜಿ. ಪಂಡಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ.

ಅರ್ಜಿದಾರರ ಕೋರಿಕೆ:

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ-ಮಹಿಳೆ ಮೀಸಲು ನಿಗದಿಪಡಿಸಿ 2021ರ ಫೆ.11ರಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿರುವ ಅರ್ಜಿದಾರರು 2018ರಿಂದ ಸತತವಾಗಿ ಮೇಯರ್ ಸ್ಥಾನವನ್ನು ಮಹಿಳೆಗೆ ನೀಡಲಾಗುತ್ತಿದೆ. 2018ರ ಜ.24ರಿಂದ ನ.17ರವರೆಗೆ ಎಸ್​ಸಿ-ಮಹಿಳೆ, ಸಾಮಾನ್ಯ-ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. 2020ರಲ್ಲಿ ಬಿಸಿಎ-ಮಹಿಳೆ ಇತ್ತು. ಈಗ ಸಾಮಾನ್ಯ-ಮಹಿಳೆ ನಿಗದಿಪಡಿಸಲಾಗಿದೆ. ಇದು ಕಾನೂನುಬಾಹಿರವಾಗಿದ್ದು, ಸರ್ಕಾರದ ಅಧಿಸೂಚನೆ ರದ್ದುಪಡಿಸಿ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿರಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details