ಬೆಂಗಳೂರು: ರಾಜ್ಯ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ಅನಂತ ರಾಮನಾಥ ಹೆಗಡೆ, ಎಸ್.ರಾಚಯ್ಯ ಹಾಗೂ ಕೆ.ಎಸ್.ಹೇಮಲೇಖಾ ಅವರು ಇಂದು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಲ್.ಶ್ರೀನಿವಾಸಬಾಬು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಸೇರಿದಂತೆ ಹಲವು ವಕೀಲರು ಮತ್ತು ನೂತನ ನ್ಯಾಯಮೂರ್ತಿಗಳ ಕುಟುಂಬ ಸದಸ್ಯರು ಭಾಗವಹಿಸಿದ್ದರು.
ಹೈಕೋರ್ಟ್ ನೂತನ ನ್ಯಾಯಮೂರ್ತಿಗಳಿಗೆ ಅಭಿನಂದನೆ ರಾಜ್ಯ ಹೈಕೋರ್ಟ್ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ನೂತನ ನ್ಯಾಯಮೂರ್ತಿಗಳ ಸೇರ್ಪಡೆಯಿಂದಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ 46ಕ್ಕೇರಿದೆ. ಮುಂದಿನ ತಿಂಗಳು ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ನಿವೃತ್ತಿಯಾಗಲಿದ್ದಾರೆ.