ಕರ್ನಾಟಕ

karnataka

ETV Bharat / city

ಬಿಡಿಎ ಅಧ್ಯಕ್ಷರಾಗಿ ಎಸ್.ಆರ್.ವಿಶ್ವನಾಥ್ ನೇಮಕ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - ಬಿಡಿಎ ಅಧ್ಯಕ್ಷರಾಗಿ ಎಸ್.ಆರ್.ವಿಶ್ವನಾಥ್ ನೇಮಕ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾದ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದೆ.

high-court-notice-to-government-on-appointment-of-bda-president
ಬಿಡಿಎ ಅಧ್ಯಕ್ಷರಾಗಿ ಎಸ್.ಆರ್.ವಿಶ್ವನಾಥ್ ನೇಮಕ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Oct 22, 2021, 12:56 AM IST

ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ನಗರದ ವಕೀಲ ಎ.ಎಸ್ ಹರೀಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಎಸ್.ಆರ್.ವಿಶ್ವನಾಥ್ ಅವರನ್ನು ನಿಯಮ ಬಾಹಿರವಾಗಿ ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹೀಗಾಗಿ, ಅಧ್ಯಕ್ಷಸ್ಥಾನದಿಂದ ಅವರನ್ನು ಅನೂರ್ಜಿತಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ:ನಿವೃತ್ತ ಮುಖ್ಯ ಇಂಜಿನಿಯರ್‌ನ 7.48 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ABOUT THE AUTHOR

...view details