ಬೆಂಗಳೂರು : ಕಳೆದ ಜನವರಿ 23ಕ್ಕೆ ಅವಧಿ ಪೂರ್ಣಗೊಂಡಿರುವ ಬೆಂಗಳೂರು ವಕೀಲರ ಸಂಘದ(ಎಎಬಿ) ಕಾರ್ಯಕಾರಿ ಸಮಿತಿಗೆ 2021ರ ಡಿ.22ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ಮಾಡಿದೆ.
ಕಳೆದ ಸೆ.4ರಂದು ಸಂಘದ ಆಡಳಿತ ನಿರ್ವಹಣೆಗೆ ನಗರ ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿ ಆಗಿ ನೇಮಿಸಿದ್ದ ಸಹಕಾರ ಇಲಾಖೆ ಆದೇಶ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಚುನಾವಣೆ ನಡೆಸಲು ಎನ್.ಎಸ್. ಸತ್ಯನಾರಾಯಣ ಗುಪ್ತ ಅವರ ಅಧ್ಯಕ್ಷತೆಯಲ್ಲಿ ಏಳು ಸದಸ್ಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ಕೂಡ ರಚನೆ ಮಾಡಿದೆ. ನ್ಯಾಯಾಲಯ ರಚಿಸಿರುವ ಉನ್ನತ ಮಟ್ಟದ ಸಮಿತಿ 2021ರ ಡಿ.2ರೊಳಗೆ ಎಎಬಿ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸಬೇಕು.