ಕರ್ನಾಟಕ

karnataka

ETV Bharat / city

ವಾಹನ ಚಾಲನಾ ಪರವಾನಿಗೆ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಹೈಕೋರ್ಟ್ ಆದೇಶ - ವಾಹನ ಚಾಲನಾ ಪರವಾನಿಗೆ

ವಾಹನ ಚಾಲನಾ ಪರವಾನಿಗೆ ನೀಡುವ ಮೊದಲು ನಡೆಸುವ ಪರೀಕ್ಷೆಗಳಲ್ಲಿ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15ರ ನಿಯಮಗಳನ್ನು ಸರಿಯಾಗಿಪಾಲಿಸಲಾಗುತ್ತಿಲ್ಲ ಎಂದು ಸಲ್ಲಿಸಲಾಗಿದ್ದ ಪಿಐಎಲ್‌ನ ವಿಚಾರಣೆ ಹೈಕೋರ್ಟ್‌ನಲ್ಲಿಂದು ನಡೆಯಿತು. ಮೋಟಾರು ವಾಹನ ಕಾಯ್ದೆ-1989ರ ಸೆಕ್ಷನ್ 15 (2) ಕಟ್ಟುನಿಟ್ಟಾಗಿ ಪಾಲಿಸುವಂತೆ ಚಾಲನಾ ಪರವಾನಿಗೆ ನೀಡುವ ಸಂಸ್ಥೆಗಳಿಗೆ ಹೈಕೋರ್ಟ್ ಇದೇ ವೇಳೆ ಸೂಚಿಸಿತು.

High Court order to strictly adhere to driving license rule
ವಾಹನ ಚಾಲನಾ ಪರವಾನಿಗೆ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಹೈಕೋರ್ಟ್ ಆದೇಶ

By

Published : Nov 16, 2021, 2:43 AM IST

ಬೆಂಗಳೂರು:ವಾಹನ ಚಾಲನಾ ಪರವಾನಿಗೆ ನೀಡಲು ಅಗತ್ಯ ಪರೀಕ್ಷೆ ನಡೆಸುವಾಗ ಮೋಟಾರು ವಾಹನ ಕಾಯ್ದೆ-1989ರ ಸೆಕ್ಷನ್ 15 (2) ಕಟ್ಟುನಿಟ್ಟಾಗಿ ಪಾಲಿಸುವಂತೆ ಚಾಲನಾ ಪರವಾನಿಗೆ ನೀಡುವ ಸಂಸ್ಥೆಗಳಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಈ ವಿಚಾರವಾಗಿ ಎಸ್. ಗೌರಿಶಂಕರ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿತು.

ವಿಚಾರಣೆ ವೇಳೆ ಅರ್ಜಿದಾರ ಗೌರಿಶಂಕರ್ ಖುದ್ದು ವಾದ ಮಂಡಿಸಿ, ವಾಹನ ಚಾಲನಾ ಪರವಾನಿಗೆ ನೀಡುವ ಮೊದಲು ನಡೆಸುವ ಪರೀಕ್ಷೆಗಳಲ್ಲಿ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15ರ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ. ವಾಹನ ಚಾಲನೆಯಲ್ಲಿ ಪಕ್ವತೆ ಪಡೆದುಕೊಳ್ಳದವರಿಗೂ ಪರವಾನಿಗೆ ನೀಡಲಾಗುತ್ತಿದೆ. 1 ಕೇಂದ್ರದಲ್ಲಿ ದಿನವೊಂದಕ್ಕೆ 200 ಮಂದಿಗೆ ಪರೀಕ್ಷೆ ನಡೆಸಲಾಗುತ್ತದೆ. ಇದು ಪ್ರಾಯೋಗಿಕವಾಗಿ ಸಾಧುವಲ್ಲ. ಹೀಗಾಗಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇದು ಜನರ ಜೀವ ಮತ್ತು ಸುರಕ್ಷತೆಯ ವಿಚಾರವಾಗಿದ್ದು, ನ್ಯಾಯಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದರು.

ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಚಾಲನಾ ಪರವಾನಿಗೆ ನೀಡುವ ಮೊದಲು ನಡೆಸಲಾಗುವ ಪರೀಕ್ಷೆಗಳನ್ನು, ನಿಯಮಗಳನ್ನು ಪಾಲಿಸಲಾಗುತ್ತಿದೆ. ಈ ಬಗ್ಗೆ 2021ರ.ಆ.13ರಂದು ಸಂಬಂಧಪಟ್ಟ ಎಲ್ಲರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದರು.

ವಾದ-ಪ್ರತಿವಾದ ಆಲಿಸಿದ ಪೀಠ, ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಅದನ್ನು ನಂಬದೇ ಇರಲು ಸಾಧ್ಯವಿಲ್ಲ. ಆದರೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 15 (2)ರ ಅನ್ವಯ ನೋಂದಣಿ ಪುಸ್ತಕ ನಿರ್ವಹಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ನೀಡುತ್ತೇವೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸಿತು.

ABOUT THE AUTHOR

...view details