ಬೆಂಗಳೂರು :ಲಾಕ್‌ಡೌನ್ ಅವಧಿಯಲ್ಲಿ ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಮಾಡಿದ ಆರೋಪ ಸಂಬಂಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಪ್ರಭು ಶಂಕರ್ ವಿರುದ್ಧ ದಾಖಲಿಸಿದ್ದ 6 ಪ್ರತ್ಯೇಕ ಎಫ್‌ಐಆರ್‌ಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಕಾಟನ್‌ಪೇಟೆ ಠಾಣೆ ಪೊಲೀಸರು ದಾಖಲಿಸಿರುವ ತಲಾ 3 ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಪ್ರಭು ಶಂಕರ್ ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.
ಇದನ್ನೂ ಓದಿ:ಸಿಸಿಬಿ ಅಧಿಕಾರಿ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ: ತನಿಖೆಗೆ ಜಂಟಿ ಪೊಲೀಸ್ ಆಯುಕ್ತರ ಆದೇಶ
ಪ್ರಕರಣದಲ್ಲಿ ಅರ್ಜಿದಾರರು ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು ಮತ್ತು ಹಣ ಸ್ವೀಕರಿಸಿದವರು ಎಂಬ ಬಗ್ಗೆ ಸಮಸ್ಯೆಗೊಳಗಾದವರು ಎಸಿಬಿಗೆ ದೂರು ಸಲ್ಲಿಸಿಲ್ಲ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳಲ್ಲಿ ಅರ್ಜಿದಾರರ ವಿರುದ್ಧ ಮಾಡಲಾದ ಆರೋಪಗಳನ್ನು ಸಾಬೀತುಪಡಿಸುವ ಸಾಕ್ಷ್ಯಧಾರಗಳಲ್ಲಿ ಸಾಕಷ್ಟು ಕೊರತೆಯಿದೆ.