ಬೆಂಗಳೂರು:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) 5 ವರ್ಷದ ಕಾನೂನು ಪದವಿಯ 2 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕೋರಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿಸೆಂಬರ್ 1ರಂದು ಕೆಎಸ್‌ಎಲ್‌ಯು ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸುವಂತೆ ಕೋರಿ ವಿದ್ಯಾರ್ಥಿಗಳಾದ ಕೆ.ಪಿ ಪ್ರಭುದೇವ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾ.ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಾಕಷ್ಟು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗೆ ಹಾಜರಾಗಲು ಲ್ಯಾಪಟಾಪ್, ಇಂಟರ್‌ನೆಟ್ ಸೇರಿದಂತೆ ಯಾವುದೇ ಅಗತ್ಯ ಸೌಲಭ್ಯಗಳು ಇರಲಿಲ್ಲ.
ಈ ಕಾರಣಕ್ಕಾಗಿಯೇ 3 ವರ್ಷದ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರಿಕ್ಷೆಗಳನ್ನು ಧಾರವಾಡ ಹೈಕೋರ್ಟ್ ಪೀಠ 2021ರ ಡಿಸೆಂಬರ್ 14ರಂದು ರದ್ದುಪಡಿಸಿ ಆದೇಶಿಸಿದೆ. ಅದೇ ರೀತಿ 5 ವರ್ಷದ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ರದ್ದುಪಡಿಸಬೇಕು. 5 ಮತ್ತು 3 ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಬಾರದು ಎಂದು ಮನವಿ ಮಾಡಿದ್ದರು.