ಬೆಂಗಳೂರು :ಉದ್ಯಮಿ ಬಿ ಆರ್ ಶೆಟ್ಟಿ ಅವರ ಪತ್ನಿ ಹೊಂದಿರುವ ಬ್ಯಾಂಕ್ ಠೇವಣಿ, ಶೇರು, ಮ್ಯೂಚುಯಲ್ ಫಂಡ್ ಸೇರಿದಂತೆ ಯಾವುದೇ ಚರಾಸ್ತಿಯನ್ನು ವರ್ಗಾವಣೆ ಮಾಡದಂತೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಉದ್ಯಮಿಯ ಚರಾಸ್ತಿ ವರ್ಗಾವಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ವಾಣಿಜ್ಯ ಕೋರ್ಟ್ನ ಆದೇಶ ಪ್ರಶ್ನಿಸಿ ಬ್ಯಾಂಕ್ ಆಫ್ ಬರೋಡ ಸಲ್ಲಿಸಿರುವ ವಾಣಿಜ್ಯ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಇದೇ ವೇಳೆ ಸ್ಥಿರಾಸ್ತಿ ವರ್ಗಾವಣೆಗೆ ವಾಣಿಜ್ಯ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡಲು ನಿರಾಕರಿಸಿರುವ ಪೀಠ, ಚರಾಸ್ತಿಗಳ ಮಾರಾಟ, ಅಡಮಾನ ಸೇರಿ ಯಾವುದೇ ರೀತಿಯ ವರ್ಗಾವಣೆಗೆ ಅನುಮತಿ ಕೋರಿ ಬ್ಯಾಂಕ್ಗೆ ಅರ್ಜಿ ಸಲ್ಲಿಸಲು ಶೆಟ್ಟಿ ದಂಪತಿಗೆ ಅವಕಾಶವಿದೆ ಎಂದೂ ಹೈಕೋರ್ಟ್ ಸ್ಪಷ್ಟಪಡಿಸಿದೆ.