ಕರ್ನಾಟಕ

karnataka

ETV Bharat / city

ರಾಜ್ಯ ಬಜೆಟ್: ಹೆಚ್​ಡಿಕೆ ಕ್ಷೇತ್ರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕ್ಷೇತ್ರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

High-tech silk niche market construction
ಹೆಚ್​ಡಿಕೆ ಕ್ಷೇತ್ರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

By

Published : Mar 8, 2021, 1:21 PM IST

ಬೆಂಗಳೂರು:ಜಗತ್ತನ್ನೇ ಕಾಡಿದ ಮಹಾಮಾರಿ ಕೊರೊನಾ ಸಾಂಕ್ರಾಮಿಕ ತಂದೊಡ್ದಿದ ಕಠಿಣ ಸವಾಲು ಹಾಗೂ ಪ್ರಾಕೃತಿಕ ವಿಕೋಪಗಂತಹ ಸರಣಿ ಸಮಸ್ಯೆಗಳು ಕರ್ನಾಟಕದ ಆರ್ಥಿಕತೆಯ ತಳಪಾಯ ಅಲುಗಾಡಿಸಿದವು. ಇಂತಹ ಜಟಿಲತೆಯ ನಡುವೆಯೂ ಮುಖ್ಯಮಂತ್ರಿ ಬಿ.ಎಸ್​.​​ಯಡಿಯೂರಪ್ಪ ಅವರು ತಮ್ಮ 8ನೇ ರಾಜ್ಯ ಬಜೆಟ್​ ಮಂಡಿಸುತ್ತಿದ್ದಾರೆ.

ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕ್ಷೇತ್ರದಲ್ಲಿ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ, ಖಾಸಗಿ ಸಹಭಾಗಿತ್ವದಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ಹಾಗೂ ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ.

ಓದಿ:ಮಹಿಳಾ ದಿನಕ್ಕೆ ಗುಡ್ ನ್ಯೂಸ್​: ಮಹಿಳೆಯರಿಗೆ ಶೇ.4ರಷ್ಟು ಬಡ್ಡಿದರದಲ್ಲಿ 2 ಕೋಟಿ ರೂ.ವರೆಗೆ ಸಾಲ

ಹಸಿರೆಲೆ ಗೊಬ್ಬರಕ್ಕೆ 10 ಕೋಟಿ, ಸಾವಯವ, ಸಿರಿಧಾನ್ಯ ಮಾರಾಟಕ್ಕೆ ಇ ಮಾರುಕಟ್ಟೆ ಪ್ರೈ. ಲಿಮಿಟೆಡ್, ಅಡಕೆ ಪರಿಹಾರ ಬೆಲೆ ಪ್ರೋತ್ಸಾಹಕ್ಕೆ 25 ಕೋಟಿ ರೂಪಾಯಿ ಘೋಷಿಸಿದ್ದಾರೆ.

ABOUT THE AUTHOR

...view details