ಕರ್ನಾಟಕ

karnataka

ETV Bharat / city

ಕೊಲ್ಲೂರು ದೇವಸ್ಥಾನದ ಮಂಡಳಿ ಅಧ್ಯಕ್ಷರ ಆಯ್ಕೆ ರದ್ಧತಿಗೆ ಹೈಕೋರ್ಟ್​ ತಡೆ - ಕೊಲ್ಲೂರು ದೇವಸ್ಥಾನದ ಮಂಡಳಿ ಅಧ್ಯಕ್ಷರ ಆಯ್ಕೆ ರದ್ಧತಿಗೆ ಹೈಕೋರ್ಟ್​ ತಡೆ

ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ರದ್ಧತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ, ಮಹತ್ವದ ಆದೇಶ ಹೊರಡಿಸಿದೆ.

Kollur temple managing committee
Kollur temple managing committee

By

Published : Dec 17, 2021, 5:19 AM IST

ಬೆಂಗಳೂರು:ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ಆಯ್ಕೆ ಮಾಡಿದ್ದನ್ನು ರದ್ದುಪಡಿಸಿ ಹೈಕೋರ್ಟ್​ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಚಂದ್ರಶೇಖರ ಶೆಟ್ಟಿ ಮತ್ತು ಸದಸ್ಯ ಗಣೇಶ್ ಕಿಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಮಧ್ಯಂತರ ಆದೇಶ ನೀಡಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಚಂದ್ರಶೇಖರ ಶೆಟ್ಟಿ ಮತ್ತು ಸದಸ್ಯ ಸ್ಥಾನದಲ್ಲಿ ಗಣೇಶ್ ಕಿಣಿ ಮುಂದುವರಿಯಬಹುದು. ಸಮಿತಿಯು ಸಭೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸಬಹುದು. ಆದರೆ, ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಇವರು ಮತದಾನ ಮಾಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ:ಗಣೇಶ್ ಕಿಣಿ ಹಾಗೂ ಚಂದ್ರಶೇಖರ್ ಶೆಟ್ಟಿ ಸೇರಿದಂತೆ 9 ಮಂದಿಯನ್ನು ಉಡುಪಿಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಧಾರ್ಮಿಕ ಪರಿಷತ್ತು 2020ರ ಅಕ್ಟೋಬರ್ 27ರಂದು ಆದೇಶಿಸಿತ್ತು. ಆದರೆ, 2021ರ ಮಾ.24ರಂದು ಗಣೇಶ್ ಕಿಣಿ ಹಾಗೂ ಏ.15ರಂದು ಚಂದ್ರಶೇಖರ ಶೆಟ್ಟಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಂತರ ಏ.26ರಂದು ನಡೆದ ವ್ಯವಸ್ಥಾಪನಾ ಸಭೆಯಲ್ಲಿ ಇವರಿಬ್ಬರು ಭಾಗವಹಿಸಿದ್ದರು. ಅಲ್ಲದೇ ಸಭೆಯಲ್ಲಿ ಸದಸ್ಯರ ಮತದಾನದ ಮೇರೆಗೆ ಚಂದ್ರಶೇಖರ ಶೆಟ್ಟಿ ಅವರನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.

ಇದನ್ನೂ ಓದಿರಿ:Love You Rachchu: ಮರ್ಡರ್​ ಮಿಸ್ಟ್ರಿಯ ಸುತ್ತ ಅಜಯ್​ ರಾವ್​​ 'ಲವ್​​ ಯು ರಚ್ಚು' ಕಹಾನಿ

ಈ ಕ್ರಮವನ್ನು ಪ್ರಶ್ನಿಸಿ ಉಡುಪಿಯ ಗೋಪಾಲಕೃಷ್ಣ ಮತ್ತಿತರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಚಂದ್ರಶೇಖರ ಶೆಟ್ಟಿ ಅವರನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಮಿತಿ ಸಭೆಯ ನಡಾವಳಿಯನ್ನು ರದ್ದುಪಡಿಸಿತ್ತು. ಇದರಿಂದಾಗಿ ಅಧ್ಯಕ್ಷ ಹುದ್ದೆ ಕಳೆದುಕೊಂಡ ಚಂದ್ರಶೇಖರ ಶೆಟ್ಟಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ABOUT THE AUTHOR

...view details