ಬೆಂಗಳೂರು:ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದಕ್ಕೆ ನಿರ್ಬಂಧಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಜತೆಗೆ ಮತ್ತೆ ನಾಲ್ಕು ರಿಟ್ ಅರ್ಜಿಗಳು ಹೈಕೋರ್ಟ್‌ಗೆ ಸಲ್ಲಿಕೆಯಾಗಿವೆ.
ಈ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಲಿದೆ. ವಸ್ತ್ರ ಸಂಹಿತೆ ಕುರಿತಂತೆ ರಾಜ್ಯ ಸರ್ಕಾರ ಜನವರಿ 31ರಂದು ಹೊರಡಿಸಿರುವ ಸುತ್ತೋಲೆಯನ್ನು ಕೂಡ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಉಡುಪಿಯ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ್ ನಿರ್ದೇಶನದಂತೆ ಹಿಜಾಬ್ ನಿರ್ಬಂಧಿಸಿದ್ದಾರೆಂದು ಆರೋಪಿಸಿ ಭಂಡಾರ್ಕರ್ಸ್ ಕಾಲೇಜ್ನ ಮೂರನೇ ಸೆಮಿಸ್ಟರ್ನ ವಿದ್ಯಾರ್ಥಿನಿಯರಾದ ಸುಹಾ ಮೌಲಾನಾ ಹಾಗೂ ಐಶಾ ಅಲೀಫಾ ಕೌಸರ್ ತಮ್ಮ ಪೋಷಕರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.