ಬೆಂಗಳೂರು :ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವಂತೆ ಸರಕಾರ ಆದೇಶ ನೀಡಿದೆ.
ಅಂತೆಯೇ ಉಡುಪಿಯ ಶಾಲೆಗಳು ತೆರೆದಿದ್ದು,ಹಲವು ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಎಲ್ಲರೂ ಹಿಜಾಬ್ ತೆಗೆದಿಟ್ಟು ಬಂದಿದ್ದಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸುತ್ತಿದ್ದಾರೆ. ಪ್ರತಿಭಟಿಸಿದವರ ಸಂಖ್ಯೆ ಕೇವಲ ಬೆರಳೆಣಿಕೆಯಷ್ಟು ಮಾತ್ರ. ಜಿಲ್ಲೆಯ ಮಟ್ಟದಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಅವರು ಹೇಳಿದರು.
ಪೋಷಕರ ಜೊತೆಗೂ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ಇನ್ನು ಅಧ್ಯಾಪಕಿಯರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವವರು. ಇವರೂ ಕೂಡ ಹಿಜಾಬ್ ಹಾಕುವಂತಿಲ್ಲ. ಮಕ್ಕಳಿಗೆ ಇರುವ ನಿಯಮವು ಶಿಕ್ಷಕರಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.