ಬೆಂಗಳೂರು:ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಬಹುತೇಕ ಎಲ್ಲ ಕಾಲೇಜುಗಳಿಗೆ ಹಿಜಾಬ್ ವರ್ಸಸ್ ಕೇಸರಿ ವಿವಾದ ವ್ಯಾಪಿಸಿದ್ದು, ಈಗಾಗಲೇ ರಾಜಕೀಯ ತಿರುವು ಸಹ ಪಡೆದುಕೊಂಡಿದೆ. ಇದೇ ವಿಚಾರವಾಗಿ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇಂದು ಕೂಡ ವಾದ-ಪ್ರತಿವಾದ ಮುಂದುವರೆಯಲಿದೆ.
ನ್ಯಾಯಮೂರ್ತಿ ಕೃಷ್ಣ ಎಸ್.ದಿಕ್ಷೀತ್ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ಇಂದು ವಿಚಾರಣೆ ನಡೆಯಲಿದೆ. ಹಿಜಾಬ್ ಧರಿಸಲು ಅವಕಾಶ ಕಲ್ಪಿಸುವಂತೆ ಕೋರಿರುವ ಅರ್ಜಿದಾರರ ಪರ ದೇವದತ್ ಕಾಮತ್ ವಾದ ಮಂಡಿಸಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಮೂರ್ತಿಗಳು ವಿಚಾರಣೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದಾರೆ.
ಇದನ್ನೂ ಓದಿರಿ:'ಹಿಜಾಬ್ ಕಾರಣಕ್ಕಾಗಿ ಹೆಣ್ಣು ಮಕ್ಕಳಿಗೆ ಶಾಲಾ ಪ್ರವೇಶ ನೀಡದಿರುವುದು ಅತ್ಯಂತ ಭೀಕರ':ಹಿಜಾಬ್ ವಿವಾದಕ್ಕೆ ಮಲಾಲಾ ಪ್ರತಿಕ್ರಿಯೆ
ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಿರುವುದನ್ನ ಪ್ರಶ್ನೆ ಮಾಡಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್ ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, ಇದನ್ನ ಪ್ರಶ್ನೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಇದರ ಜೊತೆಗೆ ಇತರೆ ನಾಲ್ಕು ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆ ಸಹ ಇಂದು ಮುಂದುವರೆಯಲಿದೆ.
ಹಿಜಾಬ್ ವಿವಾದ ರಾಜ್ಯದಲ್ಲಿ ತಾರಕಕ್ಕೆ ಏರಿದ್ದು, ನಿನ್ನೆ ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಿತು. ಅರ್ಜಿದಾರರು ಸಲ್ಲಿಕೆ ಮಾಡಿರುವ ನಾಲ್ಕೂ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿದ್ದು,ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.