ನವದೆಹಲಿ :ಉತ್ತರಪ್ರದೇಶ ಮತ್ತು ಕರ್ನಾಟಕಕ್ಕೆ ಉತ್ತಮ ಭವಿಷ್ಯವಿದೆ. ನೂರಕ್ಕೆ ನೂರರಷ್ಟು ಈ ರಾಜ್ಯಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಗೆ ಭೇಟಿ ನೀಡಿ ಶುಕ್ರವಾರವಷ್ಟೇ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ, ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಬಿಎಸ್ವೈ, ಅಮಿತ್ ಶಾ ಅವರು ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸೂಚಿಸಿದ್ದಾರೆ ಎಂದಿದ್ದಾರೆ.