ಬೆಂಗಳೂರು:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಆರಂಭಿಸಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಆಯಾಸಗೊಂಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಯೋಗಕ್ಷೇಮ ವಿಚಾರಿಸಿದರು.
ಮೊದಲ ದಿನದ ಪಾದಯಾತ್ರೆಯಲ್ಲಿ ಭಾಗವಹಿಸಿ ಜ್ವರದ ಕಾರಣಕ್ಕೆ ಅರ್ಧಕ್ಕೆ ವಾಪಸ್ ಆಗಿದ್ದ ಸಿದ್ದರಾಮಯ್ಯ ವಿಶ್ರಾಂತಿ ಪಡೆದು ನಿನ್ನೆ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸಿದರು.