ಬೆಂಗಳೂರು: ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ನ್ಯಾಯಾಲಯದ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 8.70 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. 45 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಎಲ್ಲ ಕೇಂದ್ರಗಳಿಗೂ ಭದ್ರತೆ ವ್ಯವಸ್ಥೆ ಕಲ್ಪಿಸಿದ್ದೇವೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ವಿದ್ಯಾರ್ಥಿಗಳು ಶಾಂತಿಯಿಂದ, ನಿರ್ವಿಘ್ನರಾಗಿ ಪರೀಕ್ಷೆ ಬರೆಯಬೇಕು ಎಂದರು.