ಬೆಂಗಳೂರು: ನಗರದಎಲ್ಲಾ ಕಂಟೇನ್ಮೆಂಟ್ ಪ್ರದೇಶದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಕಂಟೇನ್ಮೆಂಟ್ ಪ್ರದೇಶದಲ್ಲಿ ಮತ್ತಷ್ಟು ಬಿಗಿ ಕ್ರಮ: ಬಸವರಾಜ ಬೊಮ್ಮಾಯಿ - Corona virus update
ಹೋಮ್ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳ ಮೇಲೆ ಮತ್ತಷ್ಟು ನಿಗಾ ವಹಿಸಲಾಗಿದೆ. ಹಾಗೆಯೇ ನಗರದ ಕಂಟೇನ್ಮೆಂಟ್ ಪ್ರದೇಶದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೇಕಾಬಿಟ್ಟಿ ಓಡಾಡುವವರಿಗೆ ಎಚ್ಚರ ನೀಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇದೇ ವಿಚಾರವಾಗಿ ಚರ್ಚಿಸಲು ಮತ್ತು ಸಮನ್ವಯತೆ ಸಾಧಿಸಲು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಈ ಸಭೆ ಕರೆದಿದ್ದೇವೆ. ಸಭೆಯ ಬಳಿಕ ಉಳಿದ ಮಾಹಿತಿ ನೀಡುತ್ತೇನೆ ಎಂದರು.
ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಸಮರ್ಪಕವಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳುತ್ತೇವೆ. ಮಾಸ್ಕ್ ಧರಿಸದೆ ಓಡಾಡುವರ ವಿರುದ್ಧ ಕಠಿಣ ಕ್ರಮದ ಜೊತೆ ದಂಡ ವಿಧಿಸುವ ಕಾರ್ಯ ಮಾಡಲಿದ್ದೇವೆ. ಜೊತೆಗೆ ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಸಚಿವರು ತಿಳಿಸಿದರು.
Last Updated : Jul 1, 2020, 3:56 PM IST