ಕರ್ನಾಟಕ

karnataka

ETV Bharat / city

ರಾಯಣ್ಣ ಪ್ರತಿಮೆ ವಿವಾದ ಶೀಘ್ರ ಪರಿಹಾರ; ಸಚಿವ ಬೊಮ್ಮಾಯಿ - ಬೆಂಗಳೂರು ಸುದ್ದಿ

ಇಂದು ಕಾಗಿನೆಲೆ ಗುರುಪೀಠದ ಗುರುಗಳು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಯಣ್ಣ ಪ್ರತಿಮೆ ನಿರ್ಮಾಣ ವಿವಾದವನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Home Minister Basavaraja Bommai Statement
ರಾಯಣ್ಣ ಪ್ರತಿಮೆ ವಿವಾದ ಪರಿಹರಿಸುವುದಾಗಿ ಬಿಎಸ್​ವೈ ಭರವಸೆ ನೀಡಿದ್ದಾರೆ: ಸಚಿವ ಬೊಮ್ಮಾಯಿ

By

Published : Aug 26, 2020, 7:24 PM IST

ಬೆಂಗಳೂರು:ಬೆಳಗಾವಿಯಲ್ಲಿ ತಲೆದೋರಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿವಾದವನ್ನು ಪರಿಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಯಣ್ಣ ಪ್ರತಿಮೆ ವಿವಾದ ಪರಿಹರಿಸುವುದಾಗಿ ಬಿಎಸ್​ವೈ ಭರವಸೆ ನೀಡಿದ್ದಾರೆ: ಸಚಿವ ಬೊಮ್ಮಾಯಿ

ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿಚಾರ ಸಂಬಂಧ ನಾಳೆ ಹಲವು ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆಗೆ ನಿರ್ಧಾರ ಹಿನ್ನೆಲೆಯಲ್ಲಿ, ಬೊಮ್ಮಾಯಿ ನೇತೃತ್ವದಲ್ಲಿ ಕಾಗಿನೆಲೆ ಸ್ವಾಮೀಜಿಗಳ ನಿಯೋಗ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿತು. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಪ್ರತಿಮೆ ನಿರ್ಮಾಣ ವಿವಾದ ಹಾಗೂ ಪ್ರಕ್ಷುಬ್ಧ ಪರಿಸ್ಥಿತಿ ಕುರಿತು ಮಾತುಕತೆ ನಡೆಸಲಾಯಿತು.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಇಂದು ಕಾಗಿನೆಲೆ ಗುರುಪೀಠದ ಗುರುಗಳು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿಚಾರ ಕುರಿತು ಚರ್ಚೆ ನಡೆಸಲಾಯಿತು. ರಾಯಣ್ಣ ಪ್ರತಿಮೆ ನಿರ್ಮಾಣ ಮಾಡಲು ಸರ್ಕಾರ ಸಿದ್ಧವಿದ್ದು, ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಸಿಎಂ ಮಾತನಾಡಿದ್ದಾರೆ. ಹಾಗಾಗಿ ನಾಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ, ಕಾನೂನಾತ್ಮಕವಾಗಿ, ಶಾಂತಿಯುತವಾಗಿ ನಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಕಾಗಿನೆಲೆ ಶ್ರೀಗಳಾದ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ರಾಯಣ್ಣನ ಪುತ್ಥಳಿಯನ್ನು ಮರುನಿರ್ಮಾಣ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ನಾಳೆ ವಿವಿಧ ಸಂಘಟನೆಗಳು, ರಾಯಣ್ಣನ ಅಭಿಮಾನಿಗಳು ಬೆಳಗಾವಿ ಚಲೋ ರ್ಯಾಲಿ ಹಮ್ಮಿಕೊಂಡಿದ್ದಾರೆ. ದಯವಿಟ್ಟು ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆ ‌ಮಾಡಬೇಕು, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು.

ABOUT THE AUTHOR

...view details