ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ತನ್ನ ಸಹಚರರ ಮೂಲಕ ನಗರದ ಯುವಕನೊಬ್ಬನಿಂದ 5 ಲಕ್ಷ ರೂ. ಸುಲಿಗೆ ಮಾಡಿರುವ ಪ್ರಕರಣ ಆಗ್ನೇಯ ವಿಭಾಗದ ಸೆನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಪ್ರಕರಣದ ವಿವರ:ಯುವಕ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯ ಜೊತೆ ಪ್ರತಿನಿತ್ಯ ವಾಟ್ಸ್‌ಆ್ಯಪ್‌ನಲ್ಲಿ ಮಾತುಕತೆ ಮಾಡುತ್ತಿದ್ದ. ಆಗಾಗ್ಗೆ ವಿಡಿಯೋ ಕರೆ ಮಾಡುತ್ತಿದ್ದ ಯುವತಿ, ಯುವಕನಿಗೆ ಲೈಂಗಿಕವಾಗಿ ಪ್ರಚೋದಿಸಿ ತಾನೂ ಬೆತ್ತಲಾಗಿ, ಯುವಕನನ್ನು ಬೆತ್ತಲೆ ಮಾಡಿದ್ದಾಳೆ. ಈ ವಿಡಿಯೋ ರೆಕಾರ್ಡ್ ಮಾಡಿಕೊಂಡಿರುವ ಆಕೆ ಕೆಲವು ದಿನಗಳ ಬಳಿಕ ಯುವಕನಿಗೆ ಹಣ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಆದರೆ ಯುವಕ ಹಣ ನೀಡಿರಲಿಲ್ಲ.