ಬೆಂಗಳೂರು:ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರವಾಗಿ ನನ್ನ ಹೇಳಿಕೆಗೆ ಅನಗತ್ಯ ಗೊಂದಲ ಬೇಡ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಿದ್ದರಾಮಯ್ಯ ನನ್ನ ಮೊದಲ ಶತ್ರು ಎಂದಿರಲಿಲ್ಲ, ಈ ಬಗ್ಗೆ ಅನಗತ್ಯ ಗೊಂದಲ ಬೇಡ: ಹೆಚ್ಡಿಕೆ - H D Kumaraswamy
ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ. ಆ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮೂಲಕ ತಮ್ಮ ಸ್ಪಷ್ಟೀಕರಣ ನೀಡಿರುವ ಹೆಚ್ಡಿಕೆ, ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ. ಆ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದಿದ್ದಾರೆ.
ಕುಮಾರಸ್ವಾಮಿ ಆಡಿದ ಮಾತಿಗೆ ಕಾಂಗ್ರೆಸ್ ನಾಯಕರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರನ್ನು ಪ್ರತಿಪಾದಿಸಿಕೊಂಡು ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಮಾತಿನ ಅಪಾರ್ಥ ಆಗುವುದು ಬೇಡ ಎಂಬ ಉದ್ದೇಶಕ್ಕೆ ಕುಮಾರಸ್ವಾಮಿ ಟ್ವೀಟ್ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.