ಕರ್ನಾಟಕ

karnataka

ETV Bharat / city

ಪರಿಷತ್​ನಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ: ಹೊರಟ್ಟಿ ಅಭಯ

ಪರಿಷತ್​ನಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ, ಸಂಖ್ಯಾಬಲ ಇದ್ದರೂ ನನಗೆ ಅವಕಾಶ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಮತ್ತು ಸಿಎಂ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಹೊರಟ್ಟಿ ಅಭಯ
ಹೊರಟ್ಟಿ ಅಭಯ

By

Published : Feb 9, 2021, 4:47 PM IST

ಬೆಂಗಳೂರು:ಇಲ್ಲಿಯ ತನಕ 15 ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. 11 ಸಭಾಪತಿಗಳನ್ನು ನೋಡಿದ್ದೇನೆ. ಆದರೆ ನಾನು ಬದಲಾಗಿಲ್ಲ. ಪರಿಷತ್​ನಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ ಎಂದು ನೂತನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ವಿಧಾನ ಪರಿಷತ್ ಸಭಾಪತಿಯಾದ ನಂತರ ಸದಸ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ನಾನು ಬಂದ ಕಾಲಕ್ಕೂ ಈಗಿನ ಕಾಲಕ್ಕೂ ಬಹಳ ವ್ಯತ್ಯಾಸ ಇದೆ. ಯಾವುದೋ ಒಂದು ಸವಾಲಿನ ಕಾರಣಕ್ಕೆ 80ರಲ್ಲಿ ನಾನು ರಾಜಕಾರಣಕ್ಕೆ ಬಂದೆ. ಅಲ್ಲಿಂದ ಇಲ್ಲಿಯ ತನಕ 15 ಸಿಎಂಗಳನ್ನು ನೋಡಿದ್ದೇನೆ. 11 ಸಭಾಪತಿಗಳನ್ನು ನೋಡಿದ್ದೇನೆ. ಆದರೆ ನಾನು ಬದಲಾಗಿಲ್ಲ ಎಂದರು.

ಪರಿಷತ್​ನಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ. ಸಂಖ್ಯಾಬಲ ಇದ್ದರೂ ನನಗೆ ಅವಕಾಶ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಮತ್ತು ಸಿಎಂ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಜಾತ್ಯಾತೀತ ಸಂಸ್ಥೆಯನ್ನಾಗಿ ರೂಪಿಸಿ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ವಿಚಾರ ಚರ್ಚೆ ಮಾಡಿಸಿದ್ದರು. ಸಮಾನತೆಯನ್ನು ಎತ್ತಿ ಹಿಡಿದಿದ್ದರು. ಅದರಂತೆ ನಾನು ಕೂಡ ಹಿರಿಯರ ಸದನದಲ್ಲಿ ಸದನದ ಗೌರವ ಎತ್ತಿ ಹಿಡಿಯುವ ರೀತಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅಭಯ ನೀಡಿದರು.

ABOUT THE AUTHOR

...view details