ಬೆಂಗಳೂರು: ನಾನು ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು.
ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ?. ಆದಷ್ಟು ಬೇಗ ಮಂಗಳಮುಖಿ ಸರ್ಕಾರ ತೆಗೆಯಬೇಕು. ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ ಇದು ಎಂದು ಕಿಡಿಕಾರಿದರು.