ಬೆಂಗಳೂರು :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆ ತಾವು ದೂರವಾಣಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಜೊತೆ ದೂರವಾಣಿಯಲ್ಲಿ ಮಾತನಾಡಿಲ್ಲ : ದೊಡ್ಡಗೌಡರ ಸ್ಪಷ್ಟನೆ - H D Devegowda statement on B S yedyurappa
ಮಾಧ್ಯಮಗಳಲ್ಲಿ ನಾನು ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ದೂರವಾಣಿ ಮೂಲಕ ಸಂಭಾಷಣೆ ಮಾಡಿದ್ದೇವೆ ಎಂದು ಬರುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು ಎಂದು ದೇವೇಗೌಡರು ಹೇಳಿದ್ದಾರೆ.

ಹೆಚ್. ಡಿ. ದೇವೇಗೌಡ
ಕೆಲವು ಮಾಧ್ಯಮಗಳಲ್ಲಿ ನಾನು ಮತ್ತು ಸಿಎಂ ಬಿ ಎಸ್ ಯಡಿಯೂರಪ್ಪನವರು ದೂರವಾಣಿ ಮೂಲಕ ಸಂಭಾಷಣೆ ಮಾಡಿದ್ದೇವೆ ಎಂದು ಬರುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ದೇವೇಗೌಡರು ಹೇಳಿದ್ದಾರೆ.
ತಮ್ಮ ಹಾಗೂ ಯಡಿಯೂರಪ್ಪನವರೊಂದಿಗೆ ಆ ರೀತಿ ಯಾವ ಸಂಭಾಷಣೆಯೂ ನಡೆದಿಲ್ಲ ಎಂದು ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.