ಬೆಂಗಳೂರು : ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ನಿಯಮಬಾಹಿರ ಎಂದು ಆರೋಪಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಲ್ಲಿಸಿರುವ ಅರ್ಜಿಯನ್ನು ನಿನ್ನೆ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ(ಸಿಎಟಿ) ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಅವರು, ಸರ್ಕಾರದ ವರ್ಗಾವಣೆ ಕ್ರಮವನ್ನು ಸಮರ್ಥಿಸಿಕೊಂಡರು. ಜತೆಗೆ ಹೆಚ್ಚುವರಿ ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ಸಿಎಟಿ ವಿಚಾರಣೆಯನ್ನು ಡಿ.22ಕ್ಕೆ ಮುಂದೂಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಹುದ್ದೆ ವಿವಾದ ; ಡಿ.22ಕ್ಕೆ ಸಿಎಟಿ ವಿಚಾರಣೆ
ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡುವ ಉದ್ದೇಶದಿಂದ ಹಿಂದಿನ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ವರ್ಗಾವಣೆ ಮಾಡಿದ್ದ ಆರೋಪ ಸರ್ಕಾರ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ ಡಿ.22ಕ್ಕೆ ಮುಂದೂಡಿದೆ.
ಮೈಸೂರು ಜಿಲ್ಲಾಧಿಕಾರಿ ಹುದ್ದೆ ವಿವಾದ ; ಡಿ.22ಕ್ಕೆ ಸಿಎಟಿ ವಿಚಾರಣೆ
ಪ್ರಕರಣದ ಹಿನ್ನೆಲೆ
ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸುವ ಉದ್ದೇಶದಿಂದಲೇ ಸರ್ಕಾರ ಬಿ. ಶರತ್ ಅವರನ್ನು ಏಕಾಏಕಿ ವರ್ಗವಣೆ ಮಾಡಿ ಆದೇಶಿಸಿತ್ತು. ಆಗಸ್ಟ್ 29ರಂದು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಶರತ್ ಅವರನ್ನು ಸೆಪ್ಟೆಂಬರ್ 27ರಂದು ಒಂದು ತಿಂಗಳು ತುಂಬುವ ಮುನ್ನವೇ ವರ್ಗಾವಣೆ ಮಾಡಿತ್ತು. ಸರ್ಕಾರದ ಈ ಕ್ರಮಕ್ಕೆ ಆಕ್ಷೇಪಿಸಿ ಸ್ಥಳೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಬಳಿಕ ಆಕ್ಟೋಬರ್ ಮೊದಲ ವಾರದಲ್ಲಿ ಬಿ. ಶರತ್ ಸಿಎಟಿ ಮೆಟ್ಟಿಲೇರಿದ್ದರು.