ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ - ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶ
ಫೌಜಿಯಾ ತರನಮ್.ಬಿ, ಶಿವಾನಂದ ಕಪಾಸಿ ಹಾಗೂ ನಾಗೇಂದ್ರಪ್ರಸಾದ್.ಕೆ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಫೌಜಿಯಾ ತರನಮ್.ಬಿ - ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೊಪ್ಪಳ ಜಿಲ್ಲೆ, ಶಿವಾನಂದ ಕಪಾಸಿ- ವ್ಯವಸ್ಥಾಪಕ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮತ್ತು ಬೆಂಗಳೂರು ಮತ್ತು ನಾಗೇಂದ್ರಪ್ರಸಾದ್.ಕೆ- ಕಾರ್ಯದರ್ಶಿ, ರಿಯಲ್‍ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ಬೆಂಗಳೂರು ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಇದರ ಜೊತೆಗೆ ನಾಗೇಂದ್ರ ಪ್ರಸಾದ್ ಅವರಿಗೆ ಹೆಚ್ಚುವರಿಯಾಗಿ ತೋಟಗಾರಿಕೆ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿ ಮುಂದುವರೆಯುವಂತೆ ಸರ್ಕಾರ ಸೂಚಿಸಿದೆ.