ಕರ್ನಾಟಕ

karnataka

ETV Bharat / city

ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ : ಜನರಿಗೆ ಡಿಕೆಶಿ ಮನವಿ - ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್

ಇಂತಹ ಸಂಕಷ್ಟದ ಸಮಯದಲ್ಲಿ ಒಬ್ಬರಿಗೊಬ್ಬರು ಸಹಾಯಕ್ಕೆ ಮುಂದಾಗಬೇಕು. ಈ ಕುರಿತು ಹಲವು ದಿನಗಳಿಂದ ದೂರನ್ನು ಕೇಳುತ್ತಿದ್ದೆ, ಇದೀಗ ಕ್ರಮಕ್ಕೆ ಮುಂದಾಗಿದ್ದೇನೆ. ವೈದ್ಯಕೀಯ ಶುಲ್ಕ ಭರಿಸಲಾಗದೆ ಯಾರೂ ಕೂಡ ಜೀವ ಕಳೆದುಕೊಳ್ಳಬಾರದು. ಆಸ್ಪತ್ರೆಗಳಿಂದ ತೊಂದರೆಗೊಳಗಾದರೆ ಟ್ವಿಟರ್‌ನಲ್ಲಿ ಡಿಕೆಶಿವಕುಮಾರ್ (@DKShivakumar) ಎಂದು ಟ್ಯಾಗ್ ಮಾಡಲು ತಿಳಿಸಿದ್ದಾರೆ..

   If hospital takes more charge Contact me : DKS
If hospital takes more charge Contact me : DKS

By

Published : Jun 8, 2021, 3:25 PM IST

ಬೆಂಗಳೂರು: ಸುಪ್ರೀಂಕೋರ್ಟ್‌ನ ನಿರ್ದೇಶನವನ್ನು ಉಲ್ಲಂಘಿಸಿ ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಗಮನಕ್ಕೆ ತರಲು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ‌ ಶಿವಕುಮಾರ್ ಜನರಲ್ಲಿ ಮನವಿ‌ ಮಾಡಿದ್ದಾರೆ.

ಸೋಮವಾರ ಟ್ವೀಟ್ ಮಾಡಿದ ಅವರು, ಕೋವಿಡ್‌ನಿಂದ ಕಂಗಾಲಾಗಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಸ್ಪತ್ರೆಯ ಬಿಲ್ಲುಗಳೂ ಶಾಕ್ ನೀಡುತ್ತಿವೆ. ಮಾನ್ಯ ಸುಪ್ರೀಂಕೋರ್ಟ್ ಆದೇಶವನ್ನು‌ ಉಲ್ಲಂಘಿಸಿ ಹಲವು ಆಸ್ಪತ್ರೆಗಳು‌ ಹೆಚ್ಚಿನ ಶುಲ್ಕ ವಿಧಿಸುತ್ತಿವೆ.

ಆಸ್ಪತ್ರೆಗಳ ಈ‌ ಕೃತ್ಯ ಕೂಡಲೇ ಕೊನೆಯಾಗಬೇಕು. ನೀವು ಇಂತಹ ಸಮಸ್ಯೆ ಎದುರಿಸುತ್ತಿದ್ದರೆ ನನ್ನನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಟ್ಯಾಗ್ ಮಾಡಿ. ಕೂಡಲೇ ಆ ಕುರಿತು ಮಾಹಿತಿ ಪಡೆದು, ಸೂಕ್ತ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ ಎಂದಿದ್ದಾರೆ.

ಜನರಿಂದ ಅತ್ಯಧಿಕ ಶುಲ್ಕ ಪಡೆದು ಶೋಷಿಸುತ್ತಿರುವ ಆಸ್ಪತ್ರೆ ಹಾಗೂ ವೈದ್ಯಕೀಯ ಸೇವೆ ಒದಗಿಸುವವರನ್ನು ಕರ್ನಾಟಕ ಸರ್ಕಾರ ಪೋಷಿಸುತ್ತಿದೆ. ಮನುಕುಲದ ಸಂಕಷ್ಟದ ಸಮಯದಲ್ಲಿ ಲಾಭ ಮಾಡಿಕೊಳ್ಳುವ ಮನಸ್ಥಿತಿಯು ಅಪರಾಧವಾಗಿದೆ ಎಂದಿರುವ ಡಿ.ಕೆ‌ ಶಿವಕುಮಾರ್, ಭರಿಸಲಸಾಧ್ಯವಾದ ವೈದ್ಯಕೀಯ ಶುಲ್ಕಗಳು ಹಾಗೂ ಬಡ ಜನರ ಸಂಕಷ್ಟ ನೋಡಲು ನೋವೆನಿಸುತ್ತದೆ ಎಂದು ಬೇಸರ ಹೊರ ಹಾಕಿದ್ದಾರೆ.

ಜನರ ಸಂಕಷ್ಟದ ಜೊತೆಗೆ ವೈದ್ಯಕೀಯ ಶುಲ್ಕವೂ ಏರುತ್ತಿದೆ. ಈ ಕುರಿತು ಜಾಣಕುರುಡು ಪ್ರದರ್ಶಿಸುತ್ತಿರುವ ಬಿಜೆಪಿ ಸರ್ಕಾರ, ಜನರಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ನಮಗನ್ನಿಸುತ್ತಿದೆ. ಆಸ್ಪತ್ರೆಗಳು ಆಮ್ಲಜನಕ, ಹಾಸಿಗೆ, ಕೋವಿಡ್ ಪರೀಕ್ಷೆ ಹಾಗೂ ಆ್ಯಂಬುಲೆನ್ಸ್‌ಗಳಿಗೆ ಅಧಿಕ ಶುಲ್ಕ ಪಡೆಯುತ್ತಿರುವಾಗ ರಾಜ್ಯದ ಮುಖ್ಯಮಂತ್ರಿಗಳು ಮೌನವಹಿಸಿರುವುದು‌ ದುರಂತವೇ ಸರಿ ಎಂದು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.

ಇಂತಹ ಸಂಕಷ್ಟದ ಸಮಯದಲ್ಲಿ ಒಬ್ಬರಿಗೊಬ್ಬರು ಸಹಾಯಕ್ಕೆ ಮುಂದಾಗಬೇಕು. ಈ ಕುರಿತು ಹಲವು ದಿನಗಳಿಂದ ದೂರನ್ನು ಕೇಳುತ್ತಿದ್ದೆ, ಇದೀಗ ಕ್ರಮಕ್ಕೆ ಮುಂದಾಗಿದ್ದೇನೆ. ವೈದ್ಯಕೀಯ ಶುಲ್ಕ ಭರಿಸಲಾಗದೆ ಯಾರೂ ಕೂಡ ಜೀವ ಕಳೆದುಕೊಳ್ಳಬಾರದು. ಆಸ್ಪತ್ರೆಗಳಿಂದ ತೊಂದರೆಗೊಳಗಾದರೆ ಟ್ವಿಟರ್‌ನಲ್ಲಿ ಡಿಕೆಶಿವಕುಮಾರ್ (@DKShivakumar) ಎಂದು ಟ್ಯಾಗ್ ಮಾಡಲು ತಿಳಿಸಿದ್ದಾರೆ.

ಈಗಾಗಲೇ ನೂರಾರು ಜನರು ಸಹಾಯ ಕೋರಿ ಕೆಪಿಸಿಸಿ‌ ಅಧ್ಯಕ್ಷರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿಯೂ ಕೆಪಿಸಿಸಿ ಅಧ್ಯಕ್ಷರು ತಮ್ಮದೇ ಆದ ತಂಡದ ಮೂಲಕ ನೆರವಿಗೆ ಧಾವಿಸಿದ್ದಾರೆ.

ABOUT THE AUTHOR

...view details