ಬೆಂಗಳೂರು:ಪ್ರತಿ 25 ಮೀಟರ್ಗೆ ಒಂದು ನೋ ಪಾರ್ಕಿಂಗ್ ಬೋರ್ಡ್ ಅಳವಡಿಕೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದ ಬಳಿಕ ಮಾತನಾಡಿದ ಅವರು 15 ದಿನಗಳ ಕಾಲ ಖಾಸಗಿ ವಾಹನಗಳ ಟೋಯಿಂಗ್ ಸ್ಥಗಿತಗೊಂಡಿರುವ ಹಿನ್ನೆಲೆ ಗುರುವಾರದಿಂದ ನೋಪಾರ್ಕಿಂಗ್ ಸ್ಥಳದಲ್ಲಿ ವಾಹನ ಪಾರ್ಕ್ ಮಾಡಿದ್ರೆ ಪೊಲೀಸರು ದೂರು ದಾಖಲು ಮಾಡ್ತಾರೆ. 25 ಮೀಟರ್ಗೆ ಒಂದು ನೋ ಪಾರ್ಕಿಂಗ್ ಬೋರ್ಡ್ ಅಳವಡಿಕೆ ಮಾಡಲು ತೀರ್ಮಾನಿಸಿದ್ದೇವೆ. ಇಷ್ಟು ದಿನ 50 ಮೀಟರ್ಗೆ ನೋ ಪಾರ್ಕಿಂಗ್ ಬೋರ್ಡ್ ಹಾಕಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. 15 ದಿನಗಳ ಒಳಗೆ ಹೊಸ ನಿಯಮ ಮಾಡುತ್ತೇವೆ ಎಂದರು.