ಕರ್ನಾಟಕ

karnataka

ETV Bharat / city

ನಾವು ಅಧಿಕಾರಕ್ಕೆ ಬಂದರೆ ಜನ ವಿರೋಧಿ ಕಾಯ್ದೆಗಳು ವಜಾ: ಡಿಕೆಶಿ

ನೂತನ ಗೋಹತ್ಯೆ ನಿಷೇಧ ಮಸೂದೆ ರೈತರು ಹಾಗೂ ಚರ್ಮೋದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದೆ. ನಾವು ಅಧಿಕಾರಕ್ಕೆ ಬಂದರೆ, ಈ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಜನ ವಿರೋಧಿ ಕಾಯ್ದೆಗಳನ್ನು ಮುಲಾಜಿಲ್ಲದೆ ವಜಾಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಡಿಕೆಶಿ
ಡಿಕೆಶಿ

By

Published : Dec 11, 2020, 4:32 PM IST

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋಹತ್ಯೆ ನಿಷೇಧ ವಿಧೇಯಕವು ರೈತರು ಹಾಗೂ ಚರ್ಮೋದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದೆ. ನಾವು ಅಧಿಕಾರಕ್ಕೆ ಬಂದರೆ, ಈ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಜನ ವಿರೋಧಿ ಕಾಯ್ದೆಗಳನ್ನು ಮುಲಾಜಿಲ್ಲದೆ ವಜಾಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಗೋಹತ್ಯೆ ನಿಷೇಧ ಮಸೂದೆ ರೈತರು ಹಾಗೂ ಚರ್ಮೋದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಗ್ರಾಮ ಪಂಚಾಯಿತಿ ಚುನಾವಣೆ ನಂತರ ರಾಜ್ಯದ ಉದ್ದಗಲಕ್ಕೂ ಪ್ರತಿ ತಾಲೂಕು ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಈ ಮಧ್ಯೆ ವಯಸ್ಸಾದ ಹಾಗೂ ರೈತರಿಗೆ ಅನುಕೂಲವಾಗದ ಜಾನುವಾರುಗಳನ್ನು ರಾಜ್ಯ ಸರ್ಕಾರವೇ ದರ ನಿಗದಿ ಮಾಡಿ ಅವರಿಂದ ಖರೀದಿ ಮಾಡಬೇಕು. ಹಸುಗಳ ಮಾಲೀಕತ್ವವನ್ನು ಸರ್ಕಾರದ ಪ್ರತಿನಿಧಿಗಳೇ ಪಡೆದು, ಮಂತ್ರಿಗಳ ಮನೆಯಲ್ಲೋ, ಜಮೀನಿನಲ್ಲೋ ಸಾಕಲಿ ಎಂದು ಸಲಹೆ ನೀಡಿದರು.

ಈ ವಿಧೇಯಕ ಚರ್ಮೋದ್ಯಮದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರಲಿದೆ. ಇಡೀ ಪ್ರಪಂಚದ ಶೇ.11 ರಷ್ಟು ಚರ್ಮೊದ್ಯಮದ ಉತ್ಪಾದನೆ ಭಾರತದಲ್ಲಿದೆ. ಈಗ ಇಡೀ ಉದ್ಯಮ ಮುಚ್ಚಲಿದೆ. ಈ ವಲಯದಲ್ಲಿರುವ ಉದ್ಯೋಗಗಳ ಮೇಲೂ ಋಣಾತ್ಮಕ ಪರಿಣಾಮ ಬೀರಲಿದೆ. ಆ ಉದ್ಯೋಗಿಗಳಿಗೆ ಪರ್ಯಾಯ ಬದುಕಿನ ವ್ಯವಸ್ಥೆ ಕಲ್ಪಿಸಲು ಯಾವ ಯೋಜನೆ ರೂಪಿಸಲಾಗಿದೆ? ಎಂದು ಪ್ರಶ್ನಿಸಿದರು.

ಇದು ಒಂದು ಸಮುದಾಯದ ಮೇಲೆ ಬಣ್ಣ ಹಚ್ಚಲು, ಅವರನ್ನು ಟಾರ್ಗೆಟ್ ಮಾಡಲು ನಡೆದಿರುವ ಹುನ್ನಾರ. ಆದರೆ ಇದು ಒಂದು ಸಮುದಾಯಕ್ಕೆ ಸಂಬಂಧಿಸಿದ ವಿಚಾರವಲ್ಲ. ಈ ರಾಜ್ಯದ ರೈತರು, ಎಲ್ಲಾ ಸಮಾಜದ ವಿಚಾರ. ಅವರ ರಕ್ಷಣೆಗೆ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಪಕ್ಷ ಚಿಂತನೆ ನಡೆಸಿದೆ ಎಂದು ಡಿಕೆಶಿ ತಿಳಿಸಿದರು.

ABOUT THE AUTHOR

...view details