ಬೆಂಗಳೂರು: ಸಿಡಿ ಪ್ರಕರಣದ ಕುರಿತು ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ತಂಡದಲ್ಲಿ ಜವಾಬ್ದಾರಿಯುತ ಅಧಿಕಾರಿಗಳಿದ್ದಾರೆ. ತನಿಖೆ ಮುಗಿದ ಬಳಿಕ ಟೀಕೆ ಮಾಡಲಿ, ಈ ಸಂದರ್ಭದಲ್ಲಿ ಟೀಕೆ ಮಾಡುವ ಅಗತ್ಯವಿಲ್ಲ ಎಂದು ಡಿಜಿ, ಐ.ಜಿ.ಪಿ ಪ್ರವೀಣ್ ಸೂದ್ ಹೇಳಿದರು.
ಕೆ.ಎಸ್.ಆರ್.ಪಿ ಮೈದಾನದಲ್ಲಿ ನಡೆದ ಧ್ವಜ ದಿನಾಚರಣೆ ಕಾರ್ಯಕ್ರಮದ ನಂತರ ಸಿಡಿ ತನಿಖೆ ಕುರಿತಾದ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಸ್.ಐ.ಟಿ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.