ದೇವನಹಳ್ಳಿ: ಕಾನೂನುಬಾಹಿರವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಆರೋಪದ ಮೇಲೆ ದಾಳಿ ಮಾಡಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಕನ್ನಮಂಗಲ ಗೇಟ್ ಬಳಿ ಕೆಫೆ ಬಾರ್ ಎಂಬ ಹೆಸರಿಟ್ಟ ಹುಕ್ಕಾ ಬಾರ್ ನಡೆಸುತ್ತಿದ್ದು, ಯುವಕ ಯುವತಿಯರನ್ನು ಆಕರ್ಷಿಸಿ ಮದ್ಯ ವ್ಯಸನಿಗಳನ್ನಾಗಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ಮೇ 8ರ ರಾತ್ರಿ 8 ಗಂಟೆಗೆ ಪೊಲೀಸರು ಕೆಫೆ ರನ್ ವೇ ಮೇಲೆ ದಾಳಿ ನಡೆಸಿದ್ದಾರೆ.