ಬೆಂಗಳೂರು:ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮಾಡಿರುವ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ದೃಷ್ಟಿಯಿಂದ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಿ.ಎಸ್. ನಾರಾಯಣಸ್ವಾಮಿ ಮತ್ತು ಸಾಮಾಜಿಕ ಕಾರ್ಯಕರ್ತ ಎ.ಸಿ. ಶಿವರಾಜು ಡಿಕೆಶಿ ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ಈ ಅರ್ಜಿ ವಿಚಾರಣೆ ನಡೆಯಿತು.