ಕರ್ನಾಟಕ

karnataka

ETV Bharat / city

ರಾಜ್ಯಾದ್ಯಂತ ಮುಂದಿನ ಐದು ದಿನ ಭಾರಿ ಮಳೆ ಮುನ್ಸೂಚನೆ

ಮುಂಗಾರು ಪ್ರಭಾವದಿಂದಾಗಿ ಮುಂದಿನ 5 ದಿನಗಳವರೆಗೂ ರಾಜ್ಯಾದ್ಯಂತ ಅಧಿಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆ
ಮಳೆ

By

Published : Jun 5, 2022, 1:14 PM IST

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 5 ದಿನದಲ್ಲಿ ಇನ್ನೂ ಹೆಚ್ಚಾಗುವ ಲಕ್ಷಣಗಳಿವೆ. ಮುಂಗಾರು ಮಳೆ ಪೂರ್ಣ ಪ್ರಮಾಣದಲ್ಲಿ ಕರ್ನಾಟಕವನ್ನು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಇಂದು ಸಂಜೆಯ ವೇಳೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ನಿನ್ನೆ ಎಲ್ಲೆಲ್ಲಿ ಎಷ್ಟು ಮಳೆ: ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ತುಮಕೂರಿನ ಕುಣಿಗಲ್‌ನಲ್ಲಿ 46 ಮಿಮೀ, ಕೋನಹಳ್ಳಿಯಲ್ಲಿ 37 ಮಿಮೀ, ಮಧುಗಿರಿಯಲ್ಲಿ 26 ಮಿಮೀ, ಮಂಡ್ಯದಲ್ಲಿ 44 ಮಿಮೀ ಹಾಗೂ ಬೆಂಗಳೂರಿನಲ್ಲಿ 26 ಮಿಮೀ ಮಳೆಯಾಗಿದೆ.

ಇದನ್ನೂ ಓದಿ:ಕಂಟೈನರ್ ಡಿಪೋದಲ್ಲಿ ಭಾರಿ ಅಗ್ನಿ ಅವಘಡ: 16 ಮಂದಿ ಸಾವು, 450 ಕ್ಕೂ ಹೆಚ್ಚು ಮಂದಿಗೆ ಗಾಯ

ABOUT THE AUTHOR

...view details