ಬೆಂಗಳೂರು :ನಾಳೆ (ಶನಿವಾರ) ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಚ೦ಡಮಾರುತ ಆರ್ಭಟಿಸಲಿದೆ. ಇದರ ಪರಿಣಾಮವಾಗಿ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಾದ್ಯಂತ ಡಿಸೆಂಬರ್ 6ರವರೆಗೂ ಮಳೆ ಮುಂದುವರಿಯಲಿದೆ. ಇಂದು ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.