ಬೆಂಗಳೂರು:ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳ... ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಜೆ ಸಿಎಂ ಸಭೆ - CM meeting with senior police officers news
ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ.
ಅಪರಾಧ ಪ್ರಕರಣ ಹೆಚ್ಚಳ...ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಜೆ ಸಿಎಂ ಸಭೆ
ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಉಪ ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.
ಎರಡನೇ ಬಾರಿಗೆ ಸಭೆಗೆ ಮುಂದಾದ ಸಿಎಂ
ಈ ಹಿಂದೆ ಮುಖ್ಯಮಂತ್ರಿಯಾದ ಸಂದರ್ಭದಲ್ಲೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದ ಬಿಎಸ್ವೈ, ಇದೀಗ ಮತ್ತೆ ಎರಡನೇ ಬಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.