ಕರ್ನಾಟಕ

karnataka

ETV Bharat / city

ಸ್ವಾತಂತ್ರ್ಯ ದಿನಾಚರಣೆ: ಈ ಬಾರಿ ಮಾಣಿಕ್ ಷಾ ಪರೇಡ್ ಗ್ರೌಂಡ್ ಬದಲು ವಿಧಾನಸೌಧಕ್ಕೆ ಶಿಫ್ಟ್!? - ವಿಧಾನಸೌಧದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಸರಳ ಸ್ವಾತಂತ್ರ್ಯ ದಿನ ಆಚರಿಸುವ ಹಿನ್ನೆಲೆ ಮಾಣಿಕ್ ಷಾ ಪರೇಡ್ ಗ್ರೌಂಡ್ ಬದಲು ವಿಧಾನಸೌಧದ ಆವರಣದಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ನಡೆಸಲು ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ

vidhanasoudha
vidhanasoudha

By

Published : Jul 24, 2021, 4:20 AM IST

ಬೆಂಗಳೂರು: ರಾಜ್ಯ ಸರ್ಕಾರ ಸ್ವಾತಂತ್ರ್ಯ ದಿನಾಚರಣೆಯನ್ನು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಚರಿಸುವುದು ವಾಡಿಕೆ.‌ ಆದರೆ, ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ವಿಧಾನಸೌಧಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ವರ್ಷಂಪ್ರತಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ವಿಜ್ರಂಭಣೆಯಿಂದ ಆಚರಿಸುತ್ತದೆ. ಸಿಎಂ ಧ್ವಜಾರೋಹಣ ಮಾಡುವ ಮೂಲಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಪ್ರತಿ ಬಾರಿಯೂ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಗ್ರೌಂಡ್‌ನಲ್ಲಿ ನೆರವೇರಿಸಲಾಗುತ್ತದೆ. ಆದರೆ ಈ ಬಾರಿ ಆ ಸಂಪ್ರದಾಯ ಬದಲಾಗುವ ಲಕ್ಷಣ ಕಾಣುತ್ತಿದೆ.

ಕೋವಿಡ್ ಹಿನ್ನೆಲೆ ಕಳೆದ ವರ್ಷದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಕಳೆದ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ, ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಕಡಿಮೆ‌ ಪ್ರಮಾಣದಲ್ಲಿ ಗೌರವ ವಂದನೆ ತುಕಡಿ ಭಾಗವಹಿಸಿತ್ತು. ನಿಯಮಿತ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ಬಾರಿಯೂ ಕೋವಿಡ್ ಹಿನ್ನೆಲೆ ಸರಳ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಲಾಗುವುದು.

ವಿಧಾನಸೌಧದ ಮುಂದೆ ಸ್ವಾತಂತ್ರ್ಯ ದಿನಾಚರಣೆ?:
ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಣಿಕ್ ಷಾ ಪರೇಡ್ ಗ್ರೌಂಡ್ ಬದಲು ವಿಧಾನಸೌಧದ ಮುಂದೆ ನೆರವೇರಿಸಲು ಚಿಂತನೆ ನಡೆದಿದೆ. ಸರಳ ಸ್ವಾತಂತ್ರ್ಯ ದಿನ ಆಚರಿಸುವ ಹಿನ್ನೆಲೆ ಮಾಣಿಕ್ ಷಾ ಪರೇಡ್ ಗ್ರೌಂಡ್ ಬದಲು ವಿಧಾನಸೌಧದ ಆವರಣದಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ನಡೆಸಲು ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.‌ ಈ ಬಗ್ಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ರಾಜ್ಯ ಸರ್ಕಾರವೂ ವಿಧಾನಸೌಧದ ಮುಂಭಾಗ ಸ್ವಾತಂತ್ರ್ಯ ದಿನಾಚರಣೆ ನಡೆಸಲು ಒಲವು ಹೊಂದಿದೆ.

ಹೀಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಧಾನಸೌಧದ ಮುಂಭಾಗ ಮಾಡುವುದು ಬಹುತೇಕ ಖಚಿತವಾಗಿದೆ. ಮುಂದಿನ ವಾರ ಈ ಬಗ್ಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ABOUT THE AUTHOR

...view details