ಬೆಂಗಳೂರು: ಲಾಕ್ಡೌನ್ನಿಂದಾಗಿ ಆಹಾರ ಸಿಗದೆ ಕಂಗಾಲಾಗಿರುವ ಜನರಿಗೆ ಇಂದಿರಾ ಕ್ಯಾಂಟೀನ್ ವರದಾನವಾಗಿದ್ದು, ಸರ್ಕಾರದ ಉಚಿತ ಊಟ ನಿರ್ಧಾರ ಹಸಿದ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿದೆ.
ಲಾಕ್ಡೌನ್ನಲ್ಲಿ ಬಡವರಿಗೆ ಆಸರೆಯಾದ 'ಇಂದಿರಾ ಕ್ಯಾಂಟೀನ್' - ಇಂದಿರಾ ಕ್ಯಾಂಟೀನ್
ಲಾಕ್‌ಡೌನ್ ವೇಳೆ ಸಾಕಷ್ಟು ಬೀದಿ-ಬದಿ ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಸದ್ಯ ಸರ್ಕಾರ ಉಚಿತವಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆ ಆಹಾರ ನೀಡುತ್ತಿದೆ.
ಇಂದಿರಾ ಕ್ಯಾಂಟೀನ್
ಲಾಕ್‌ಡೌನ್ ವೇಳೆ ಸಾಕಷ್ಟು ಬೀದಿ-ಬದಿ ವ್ಯಾಪಾರಸ್ಥರು ಹಾಗೂ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಸದ್ಯ ಸರ್ಕಾರ ಉಚಿತವಾಗಿ ಇಂದಿರಾ ಕ್ಯಾಂಟೀನ್ನಲ್ಲಿ ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆ ಆಹಾರ ನೀಡುತ್ತಿದೆ.
ಯಲಹಂಕ ನ್ಯೂಟೌನ್, ಅನ್ನಪೂರ್ಣೇಶ್ವರಿ ನಗರ ಸೇರಿದಂತೆ ಹಲವು ಕಡೆ ಇಂದಿರಾ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿವೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಸಾರ್ವಜನಿಕರು ಆಹಾರ ತೆಗೆದುಕೊಳ್ಳುತ್ತಿದ್ದಾರೆ.