ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆಯಾದ 'ಇಂದಿರಾ ಕ್ಯಾಂಟೀನ್' ಹೆಸರನ್ನು ನಾಡಪ್ರಭು ಕೆಂಪೇಗೌಡ ಕ್ಯಾಂಟೀನ್ ಎಂದು ಬದಲಿಸಲು ಬಿಬಿಎಂಪಿ ಚಿಂತನೆ ನಡೆಸಿದ ಬೆನ್ನಲ್ಲೇ ಮತ್ತೊಂದು ಹೆಸರುಮುನ್ನೆಲೆಗೆ ಬಂದಿದೆ.
ಇತ್ತೀಚೆಗೆ ಇಂದಿರಾ ಕ್ಯಾಂಟೀನ್ ಅನ್ನು 'ಕೆಂಪೇಗೌಡ ಕ್ಯಾಂಟೀನ್', 'ಕುಟೀರ' ಎಂಬುದಾಗಿ ನಾಮಕರಣ ಮಾಡುವ ಕುರಿತು ಸರ್ಕಾರಕ್ಕೆ ಉಪಮೇಯರ್ ಪತ್ರ ಬರೆಯುವುದಾಗಿ ಹೇಳಿದ್ದರು. ಈಗ ಕೂಡಲಸಂಗಮದ ಬಸವ ಧರ್ಮ ಪೀಠದ ಸದಸ್ಯರು 'ಬಸವ ಕ್ಯಾಂಟೀನ್' ಎಂದು ಹೆಸರಿಡುವಂತೆಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.