ಕರ್ನಾಟಕ

karnataka

ETV Bharat / city

ಮಳೆ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಸಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ

ರಾಜ್ಯದ ಹಲವು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇಂತಹ ಪರಿಸ್ಥಿತಿಯನ್ನು ಎದುರಿಸಲು ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಿಸಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

CM Bommai instructed to DCs over Rain matter, CM Bommai meeting with DCs, Heavy rain in Karnataka, Karnataka rain news, ಮಳೆ ವಿಚಾರವಾಗಿ ಡಿಸಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ, ಡಿಸಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ, ಕರ್ನಾಟಕದಲ್ಲಿ ಭಾರೀ ಮಳೆ, ಕರ್ನಾಟಕ ಮಳೆ ಸುದ್ದಿ,
ಸಿಎಂ ಬೊಮ್ಮಾಯಿ

By

Published : Jul 7, 2022, 1:10 PM IST

ಬೆಂಗಳೂರು: ಮಳೆ ಎದುರಿಸಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ್ದೇನೆ. ಕಾರವಾರ, ಉಡುಪಿಗಳಲ್ಲಿ ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಭೂಕುಸಿತ ಆಗುತ್ತಿರುವ ಕಡೆಗಳಲ್ಲಿ ಜನವಸತಿ ಇದ್ರೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಡಿಸಿಗಳ ಖಾತೆಯಲ್ಲಿ ಹಣ ಇದೆ. ಕಾರವಾರ, ಮಂಗಳೂರುಗಳಲ್ಲಿ ಕಡಲ್ಕೊರೆತ ಆಗ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮವಹಿಸಲು ಮತ್ತು ಆಯಾ ಸ್ಥಳಕ್ಕೆ ಹೋಗಲು ಡಿಸಿಗಳಿಗೆ ಸೂಚಿಸಿದ್ದೇನೆ. ಈಗಾಗಲೇ ಕಂದಾಯ ಸಚಿವರು ಕೊಡಗಿನಲ್ಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾನಾನದ ಪ್ರಕಾರ ಇನ್ನೂ ಮೂರ್ನಾಲ್ಕು ದಿನ ಮಳೆ ಆಗಲಿದೆ ಎಂದರು.

ಇದನ್ನೂ ಓದಿ:ಕರಾವಳಿಯಲ್ಲಿ ರೆಡ್​ ಅಲರ್ಟ್, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ

'ವೈಯಕ್ತಿಕ ಕಾರಣಕ್ಕೆ ಗಲಾಟೆ': ಬಾದಾಮಿಯ ಕೆರೂರಿನಲ್ಲಿ ಕೋಮುಗಲಭೆ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದೆ. ಕೂಡಲೇ ಪೊಲೀಸರು ಗಲಭೆ ನಿಯಂತ್ರಿಸಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವರ ಬಂಧನವೂ ಆಗಿದೆ. ಸ್ಥಳದಲ್ಲಿ 144 ಸೆಕ್ಷನ್ ಜಾರಿ‌ ಮಾಡಲಾಗಿದೆ. ಎರಡೂ ಸಮುದಾಯಗಳಿಗೂ ಶಾಂತವಾಗಿರಲು ಸೂಚಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಅಧಿಕಾರಿಗಳು ಕ್ರಮ ವಹಿಸ್ತಿದ್ದಾರೆ ಎಂದು ಹೇಳಿದರು.

'ಕನ್ನಡ ನಾಡಿಗೆ ಸಂದ ಗೌರವ': ಡಾ.ವೀರೇಂದ್ರ ಹೆಗಡೆ ಅವರಿಗೆ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸಂತಸ ತಂದಿದೆ. ಇದು ಕನ್ನಡ ನಾಡಿನ ಸಮಗ್ರ ಜನತೆಗೆ ಸಂದ ಗೌರವದ ವಿಚಾರ. ಅವರು ಧರ್ಮಸ್ಥಳದ ಧರ್ಮಾಧಿಕಾರಿಯಾಗಿಯಷ್ಟೇ ಅಲ್ಲ, ಅವರ ಸೇವಾ ಕಾರ್ಯಗಳು ನಾಡಿನಾದ್ಯಂತ ಬಹಳ ಪ್ರಸಿದ್ಧಿ ಪಡೆದಿವೆ ಎಂದು ಸಿಎಂ ಬೊಮ್ಮಾಯಿ ಶ್ಲಾಘಿಸಿದರು.

ABOUT THE AUTHOR

...view details