ಬೆಂಗಳೂರು:ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ದರ್ಜೆ- 3 ಮೇಲ್ವಿಚಾರಕೇತರ ಮತ್ತು ದರ್ಜೆ- 1 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿದೆ.
ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ: ಏ.15ರಿಂದ ಪ್ರಕ್ರಿಯೆ ಶುರು - ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ.
ರಾಜ್ಯ ಸಾರಿಗೆ ನಿಗಮಗಳ ಅಂತರ್ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ಸಾರಿಗೆ ನೌಕರರ ಅಂತರ ನಿಗಮ ವರ್ಗಾವಣೆ
ಈಗಾಗಲೇ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2022ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯು ಏಪ್ರಿಲ್ 15 ರ ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದೆ. ಮೇ 14 ರ ಸಂಜೆ 5.30 ರವರೆಗೆ ಆನ್ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ, ಪತಿ- ಪತ್ನಿ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ.