ಬೆಂಗಳೂರು:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕೋರಮಂಗಲದ ಕೆಎಎಸ್ಆರ್ಪಿ ಪೊಲೀಸ್ ಪಬ್ಲಿಕ್ ಶಾಲೆ ಆವರಣದಲ್ಲಿ ಸ್ವಯಂ ರಕ್ಷಣಾ ಮತ್ತು ಕೌಶಲ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಎಸ್ಆರ್ಪಿಯಿಂದ ಮಹಿಳಾ ದಿನಾಚರಣೆ: ಇಲಾಖೆಯ ಮಹಿಳಾ ಸಾಧಕರಿಗೆ ಪುರಸ್ಕಾರ - ಕೆಎಸ್ಆರ್ಪಿ ಸಿಬ್ಬಂದಿಯನ್ನು ಗೌರವಿಸಿದ ಗೃಹಸಚಿವ ಆರಗ ಜ್ಞಾನೇಂದ್ರ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕೋರಮಂಗಲದ ಕೆಎಎಸ್ಆರ್ಪಿ ಪೊಲೀಸ್ ಪಬ್ಲಿಕ್ ಶಾಲೆ ಆವರಣದಲ್ಲಿ ಸ್ವಯಂ ರಕ್ಷಣಾ ಮತ್ತು ಕೌಶಲ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು 2014ರಲ್ಲಿ ದಕ್ಷಿಣ ಕೊರಿಯಾ ಏಷಿಯನ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ರಾಜ್ಯ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿ ಸುಶ್ಮಿತಾ ಪವಾರ್ ಹಾಗೂ ಜಯಂತಿ ಅವರಿಗೆ 3 ಲಕ್ಷ ರೂಪಾಯಿ ಚೆಕ್ ವಿತರಿಸಿ ಪುರಸ್ಕರಿಸಿದರು.
ಕರ್ನಾಟಕ ರಾಜ್ಯ ಮೀಸಲು ಪೊಲೀಸರಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್, ಕೆಎಸ್ಆರ್ಪಿ ಪೊಲೀಸ್ ಮಹಾ ನಿರೀಕ್ಷಕ ರವಿ ಎಸ್., ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಭಾಗಿಯಾಗಿದ್ದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೆಎಸ್ಆರ್ಪಿ ಸಮುದಾಯ ಭವನ ಉದ್ಘಾಟಿಸಿದ ಬಳಿಕ 2014ರ ದಕ್ಷಿಣ ಕೊರಿಯಾ ಏಷಿಯನ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ರಾಜ್ಯ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿ ಸುಶ್ಮಿತಾ ಪವಾರ್ ಹಾಗೂ ಜಯಂತಿ ಅವರಿಗೆ ಮೂರು ಲಕ್ಷ ರೂಪಾಯಿ ಚೆಕ್ ವಿತರಿಸಿ ಪುರಸ್ಕರಿಸಿದರು.