ಕರ್ನಾಟಕ

karnataka

ETV Bharat / city

ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನ: ರಾಜ್ಯದ ಎಲ್ಲ ಶಾಲೆಗಳಲ್ಲಿ ಆಚರಿಸುವಂತೆ ಆದೇಶ - ಕರ್ನಾಟಕದ ಎಲ್ಲ ಶಾಲೆಗಳಲ್ಲಿ ಯೋಗ ದಿನ ಆಚರಣೆ

ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.

ಅಂತಾರಾಷ್ಟ್ರೀಯ ಯೋಗ ದಿನ

By

Published : Jun 18, 2022, 6:42 AM IST

ಬೆಂಗಳೂರು: ಜೂನ್ 21ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಹಾಗೂ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ರಾಜ್ಯದ ಎಲ್ಲ ಶಾಲೆಗಳಲ್ಲಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಿಳಿಸಲಾಗಿದೆ.

ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂನ್ 21ರಂದು ಅರ್ಧ ದಿನದ ಶಾಲೆಯನ್ನು ನಡೆಸಲು ಸೂಚಿಸಲಾಗಿದೆ. ಆ ದಿನದ ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನಗಳ ಅಭ್ಯಾಸಗಳನ್ನು ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ. ಆ ದಿನದ ಅರ್ಧ ದಿನದ ಪಾಠಗಳನ್ನು ಸರಿದೂಗಿಸಲು ಜೂನ್ 25 ಶನಿವಾರದಂದು ಪೂರ್ಣ ದಿನದ ಶಾಲೆಯನ್ನು ನಡೆಸುವಂತೆ ಆದೇಶಿಸಲಾಗಿದೆ.

(ಇದನ್ನೂ ಓದಿ: ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ​: ಚಿನ್ನದ ಪದಕ ಗೆದ್ದು ಅಚ್ಚರಿಗೊಳಿಸಿದ 106 ವರ್ಷದ ವೃದ್ಧೆ)

ABOUT THE AUTHOR

...view details