ಕರ್ನಾಟಕ

karnataka

ETV Bharat / city

ವರ್ಗಾವಣೆ ಬೆನ್ನಲೇ ಸರ್ಕಾರ ವಿರುದ್ದ ಗರಂ ಆದ ಐಪಿಎಸ್ ಅಧಿಕಾರಿ ಡಿ.ರೂಪಾ

ನಿರ್ಭಯಾ ಸೇಫ್ ಸಿಟಿ ಟೆಂಡರ್ ಅವ್ಯವಹಾರ ಪ್ರಕರಣದಲ್ಲಿ ಬೆಂಗಳೂರು ನಗರ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ ವಿರುದ್ಧ ರೂಪಾ ಕಿಡಿಕಾರಿದ್ದರು. ಈಗ ಇಬ್ಬರನ್ನೂ ಸರ್ಕಾರ ವರ್ಗಾಯಿಸಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ರೂಪಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

D. Roopa
ಡಿ.ರೂಪಾ

By

Published : Dec 31, 2020, 10:33 PM IST

ಬೆಂಗಳೂರು: ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ.ರೂಪಾ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ವ್ಯವಸ್ಥಾಪಕಿ ನಿರ್ದೇಶಕಿಯಾಗಿ ವರ್ಗಾವಣೆ ಮಾಡುತ್ತಿದ್ದಂತೆ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಿರ್ಭಯಾ ಸೇಫ್ ಸಿಟಿ ಟೆಂಡರ್ ಅವ್ಯವಹಾರ ಪ್ರಕರಣದಲ್ಲಿ ಬೆಂಗಳೂರು ನಗರ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ ವಿರುದ್ಧ ರೂಪಾ ಕಿಡಿಕಾರಿದ್ದರು. ಇಬ್ಬರ ನಡುವಿನ ಮುಸುಕಿನ ಗುದ್ದಾಟ ಸರ್ಕಾರ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.‌ ಈ ಹಿನ್ನೆಲೆಯಲ್ಲಿ ನಿಂಬಾಳ್ಕರ್ ಅವರನ್ನು ರಾಜ್ಯ ಆಂತರಿಕಾ ಭದ್ರತಾ ಇಲಾಖೆಯ ಐಜಿಪಿಯಾಗಿ ಹಾಗೂ ರೂಪಾ ಅವರನ್ನು ಕರಕುಶಲ ನಿಗಮದ ಎಂಡಿಯಾಗಿ ಸರ್ಕಾರ ವರ್ಗಾವಣೆ ಮಾಡುತ್ತಿದ್ದಂತೆ ಟ್ವೀಟರ್​ನಲ್ಲಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ನನ್ನ ವರ್ಗಾವಣೆ ಬಂದಿದೆ. ಕರಕುಶಲ ನಿಗಮದ ಎಂಡಿ ಎಂದು. ಸಿಬಿಐ ಈಗಾಗಲೇ ದೋಷಾರೋಪಣೆ ಸಲ್ಲಿಸಿ ನಿಂಬಾಳ್ಕರ್ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಿ ಎಂದು ಕಳೆದ ಡಿಸೆಂಬರ್(1 ವರ್ಷ ಹಿಂದೆ) ಶಿಫಾರಸು ಮಾಡಿದ್ದೆ, ಆದರೂ ಇನ್ನೂ ಶಿಸ್ತುಕ್ರಮ ತೆಗೆದುಕೊಂಡಿಲ್ಲ. ಈ ವರ್ಗಾವಣೆ ನನ್ನನ್ನೂ ದೋಷಾರೋಪಣೆ ಎದುರಿಸುತ್ತಿರುವ ಅಧಿಕಾರಿಯನ್ನೂ ಒಂದೇ ತಕ್ಕಡಿಯಲ್ಲಿ ಅಳೆದಂತೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ABOUT THE AUTHOR

...view details