ಬೆಂಗಳೂರು: ಪೊಲೀಸ್ ತರಬೇತಿ ವಿಭಾಗದ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ.ರವೀಂದ್ರನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗರೀಕ ಹಕ್ಕು ಜಾರಿ ನಿರ್ದೇಶಾನಾಲಯ ಡಿಜಿಪಿಯಾಗಿದ್ದ ಅವಧಿಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ರಕ್ಷಣಾ ಘಟಕ ತೆರೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಶಿಫಾರಸು ಮಾಡಿದ್ದೆ. ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಮಾಡಲು ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿತ್ತು. ಸಂವಿಧಾನದಡಿ ಕರ್ತವ್ಯ ಸಲ್ಲಿಸಲು ಆಗುತ್ತಿರಲಿಲ್ಲ. ಹೀಗಾಗಿ ಐಪಿಎಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ನನ್ನ ವರ್ಗಾವಣೆ, ಮನವಿ ಅಥವಾ ಸಾರ್ವಜನಿಕ ಹಿತಾಸಕ್ತಿಯಿಂದ ಆಗಿಲ್ಲ. ನಾನು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿದ್ದಾಗ ಕೆಲವೊಂದು ಪ್ರಭಾವಿ ವ್ಯಕ್ತಿಗಳ ಹೆಸರು ಉಲ್ಲೇಖ ಮಾಡಿದ್ದೆ. ಆಗಿರುವ ವರ್ಗಾವಣೆ ಸರಿಯಿಲ್ಲ. ನನ್ನನ್ನು ಸುಖಾಸುಮ್ಮನೆ ವರ್ಗಾವಣೆ ಮಾಡಲಾಗಿದೆ. ಕೇವಲ ನನಗೆ ಕಿರುಕುಳವನ್ನು ನೀಡುವ ಉದ್ದೇಶದಿಂದಾಗಿ ವರ್ಗಾವಣೆಯನ್ನು ಮಾಡಲಾಗಿದೆ ಎಂದು ಉಲ್ಲೇಖಿಸಿ ಪಿ. ರವೀಂದ್ರನಾಥ್ ಅವರು ತಮ್ಮ ರಾಜೀನಾಮೆ ಕುರಿತು 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.