ಕರ್ನಾಟಕ

karnataka

ETV Bharat / city

ಐಟಿ ದಾಳಿ ಪ್ರಕರಣ: ಡಿ.ಕೆ. ಶಿವಕುಮಾರ್​ಗೆ ಹೈಕೋರ್ಟ್​ನಿಂದ ಬಿಗ್​ ರಿಲೀಫ್

2017ರ ಆಗಸ್ಟ್​ನಲ್ಲಿ ಡಿ.ಕೆ. ಶಿವಕುಮಾರ್​ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ವಿಚಾರಣೆಗೆ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿ, ಆದೇಶ ಹೊರಡಿಸಿದೆ.

High Court granted relief to DK Shivakumar

By

Published : Aug 20, 2019, 5:26 PM IST

ಬೆಂಗಳೂರು:ನವದೆಹಲಿ ಮತ್ತು ಕರ್ನಾಟಕದಲ್ಲಿ ತಮಗೆ ಸೇರಿದ ಫ್ಲ್ಯಾಟ್‌, ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಿಂದ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು. ಅಲ್ಲದೆ, ತನಿಖೆ ಮುಂದುವರಿಸುವಂತೆ ಹೇಳಿತ್ತು. ಈ ಆದೇಶ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಂದು ತೀರ್ಪು ಪ್ರಕಟಿಸಿರುವ ಹೈಕೋರ್ಟ್,​ ವಿಚಾರಣೆಗೆ ತಜೆಯಾಜ್ಞೆ ನೀಡಿದೆ. ಇದರಿಂದ ಡಿ.ಕೆ.ಶಿವಕುಮಾರ್​ ಅವರಿಗೆ ರಿಲೀಫ್​ ಸಿಕ್ಕಂತಾಗಿದೆ.

ಡಿಕೆಶಿ ಹೆಸರನ್ನು ಕೈಬಿಡುವಂತೆ ಕೋರಿ ಅವರ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶ ಕಾನೂನು ಬಾಹಿರ. ಹೀಗಾಗಿ ಈ ಅರ್ಜಿಯನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಹೈಕೋರ್ಟ್​ಗೆ ಮನವಿ ಮಾಡಲಾಗಿತ್ತು. ಬಳಿಕ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್​ ಅವರು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿ, ಅರ್ಜಿ ವಜಾಗೊಳಿಸಿದ್ದರು. ಅಲ್ಲದೆ,ದಾಖಲಾಗಿರುವ ದೂರಿನ ವಿಚಾರಣೆ ಅಥವಾ ತನಿಖೆಯನ್ನು ಮುಂದುವರಿಸುವಂತೆ ಆದೇಶಿಸಿದ್ದರು. ಇದೀಗ ಕೆಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ.

ABOUT THE AUTHOR

...view details