ಬೆಂಗಳೂರು: ಉದ್ಯಮಿ ಕೆಜಿಎಫ್ ಬಾಬು ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬಾಬು ಅವರಿಗೆ ಸಂಬಂಧಿಸಿದ 7 ಕಡೆಗಳಲ್ಲಿ ಐಟಿ ದಾಳಿ ನಡೆಸಿ ಶಾಕ್ ನೀಡಿದೆ. ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿ ಒಡೆಯನಾಗಿರುವ ಕೆಜಿಎಫ್ ಬಾಬು ಕಳೆದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ನಾಮಪತ್ರ ಸಲ್ಲಿಸುವಾಗ 1741 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು.
ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ - ವಿಧಾನಪರಿಷತ್ ಚುನಾವಣೆ
ಸಾವಿರ ಕೋಟಿ ಆಸ್ತಿಪಾಸ್ತಿಗೆ ಒಡೆಯನಾಗಿರುವ ಕೆಜಿಎಫ್ ಬಾಬು ಅವರಿಗೆ ಸಂಬಂಧಿಸಿದ 7 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಉದ್ಯಮಿ ಕೆಜಿಎಫ್ ಬಾಬು
ಆದಾಯ ತೆರಿಗೆಯಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆಯಲ್ಲಿ ಇವತ್ತು ಬಾಬು ಅವರ ವಸಂತನಗರದ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲಪರ್ಸ್ ಕಚೇರಿ, ಹಾಗೂ ರಿಯಲ್ ಎಸ್ಟೇಟ್ ಕಚೇರಿಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಆದಾಯದ ಮೂಲಗಳು, ವ್ಯವಹಾರದ ಮೌಲ್ಯ, ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಬೃಹನ್ಮುಂಬೈ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷನ ನಿವಾಸದ ಮೇಲೆ ಐಟಿ, ಇ.ಡಿ ದಾಳಿ
Last Updated : May 28, 2022, 1:02 PM IST